ಬಿ.ಸಿ.ರೋಡ್ : ಅ.10ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಬಂಟ್ವಾಳ, ಅ. 6: ಲಯನ್ಸ್ ಕ್ಲಬ್ ಬಂಟ್ವಾಳ ಇದರ ವತಿಯಿಂದ ಯೆನಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಅ. 10ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ತನಕ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರ ದಲ್ಲಿ ಬೃಹತ್ ಉಚಿತ ಆಯುರ್ವೇದಿಕ್ ವೈದ್ಯರಿಂದ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಕೃಷ್ಣಶ್ಯಾಂ ತಿಳಿಸಿದರು.
ಅವರು ಮಂಗಳವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಬೆಳಿಗ್ಗೆ ನಡೆಯುವ ಸಭಾ ಕಾರ್ಯ ಕ್ರಮದಲ್ಲಿ ಲಯನ್ಸ್ ಜಿಲ್ಲಾ ರಾಜ್ಯಪಾಲ ಲಯನ್ ಡಾ. ಗೀತ್‌ಪ್ರಕಾಶ್ ಶಿಬಿರವನ್ನು ಉದ್ಘಾಟಿಸಿದ್ದಾರೆ.
ಅಧ್ಯಕ್ಷತೆಯನ್ನು ಬಂಟ್ವಾಳ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಲಯನ್ ಕೃಷ್ಣಶ್ಯಾಮ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಲಯನ್ಸ್‌ನ ಪ್ರಥಮ ಜಿಲ್ಲಾ ಉಪರಾಜ್ಯಪಾಲ ಲಯನ್ ವಸಂತ ಕುಮಾರ್ ಶೆಟ್ಟಿ ಮತ್ತು ಯೆನೆಪೋಯ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಗುರುರಾಜ್ ಎಚ್. ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಬಂಟ್ವಾಳ ಲಯನ್ಸ್ ಕ್ಲಬ್‌ನ ನಿರ್ದೇಶಕ ಲಕ್ಷ್ಮಣ ಕುಲಾಲ್, ಕಾರ್ಯದರ್ಶಿ ವೈಕುಂಠ ಕುಡ್ವಾ, ಕೋಶಾಧಿಕಾರಿ ದಿಶಾ ಆಶೀರ್ವಾದ್ ಉಪಸ್ಥಿತರಿದ್ದರು.







