ವಿಷ ಸೇವಿಸಿ ಆತ್ಮಹತ್ಯೆ
ಉಪ್ಪಿನಂಗಡಿ : ಇಲ್ಲಿಗೆ ಸಮೀಪದ ಉರುವಾಲು ಪದವು ಬರಮೇಲು ನಿವಾಸಿ ನಾರಾಯಣ ಶೆಟ್ಟಿ (47) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಮಂಗಳವಾರ ನಡೆದಿದೆ.
ಕೊರೋನ ಲಾಕ್ ಡೌನ್ ಬಳಿಕ ಕೆಲಸವಿಲ್ಲದೆ ಮನೆಯಲ್ಲಿಯೇ ಇದ್ದು, ಇದರಿಂದ ಮನನೊಂದು ಈ ಕೃತ್ಯವೆಸಗಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





