ಸಾಲಮನ್ನಾ ಯೋಜನೆ ಫಲಾನುಭವಿಗಳ ಆಯ್ಕೆ ಮಾನದಂಡದ ಬಗ್ಗೆ ತರಬೇತಿ ಶಿಬಿರ

ಉಡುಪಿ, ಅ.7: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳ ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾಲ ಮನ್ನಾ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ರೈತರ ಸಾಲಮನ್ನಾ ಯೋಜನೆಯ ಫಲಾನುಭವಿಗಳ ಆಯ್ಕೆ ಮಾನದಂಡದ ಬಗ್ಗೆ ತರಬೇತಿ ಶಿಬಿರವು ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾ ಭವನದಲ್ಲಿ ಬುಧವಾರ ಜರಗಿತು.
ಸಮಾರಂಭದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ-ದ.ಕ ಜಿಲ್ಲಾ ಮೀನು ಮಾರಾಟ ಮಹಾಮಂಡಳ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಯೂನಿಯನ್ ನಿರ್ದೇಶಕ ಕಟಪಾಡಿ ಶಂಕರ ಪೂಜಾರಿ, ಪಡುಬಿದ್ರೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಸುಧೀರ್ ಕುಮಾರ್, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಗಣೇಶ್ ಆರ್., ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್, ಸಹಕಾರ ಸಂಘಗಳ ಕುಂದಾಪುರ ಉಪವಿಭಾಗದ ಸಹಾಯಕ ನಿಬಂಧಕ ಅರುಣ್ ಕುಮಾರ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಪುರುಷೋತ್ತಮ ಎಸ್.ಪಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.





