Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾತ್ರೆ, ಮಹೋತ್ಸವಗಳಲ್ಲಿ ಕೋವಿಡ್...

ಜಾತ್ರೆ, ಮಹೋತ್ಸವಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ: ಜಿಲ್ಲಾಧಿಕಾರಿ ಜಗದೀಶ್

ವಾರ್ತಾಭಾರತಿವಾರ್ತಾಭಾರತಿ7 Oct 2020 7:33 PM IST
share
ಜಾತ್ರೆ, ಮಹೋತ್ಸವಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ: ಜಿಲ್ಲಾಧಿಕಾರಿ ಜಗದೀಶ್

ಉಡುಪಿ, ಅ.7: ನವರಾತ್ರಿ, ದೀಪಾವಳಿ ಸೇರಿದಂತೆ, ಇನ್ನಿತರ ಜಾತ್ರಾ ಮಹೋತ್ಸವಗಳಲ್ಲಿ ಕೊರೋನಾ ವೈರಸ್ ಹರಡದಂತೆ ಎಚ್ಚರ ವಹಿಸಲು ಸರಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲೆಯ ದೇವಸ್ಥಾನದ ಆಡಳಿತಾಧಿಕಾರಿಗಳು ಹಾಗೂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲೆಯ ದೇವಾಲಯಗಳಲ್ಲಿ ಮುಂಬರುವ ನವರಾತ್ರಿ ಉತ್ಸವ ಆಚರಣೆ, ದೀಪಾವಳಿ ಹಾಗೂ ಇನ್ನಿತರೆ ಜಾತ್ರಾ ಮಹೋತ್ಸವಗಳನ್ನು ನಡೆಸುವ ಸಂದರ್ಭ ದಲ್ಲಿ ಪಾಲಿಸಬೇಕಾದ ಕ್ರಮಗಳ ಕುರಿತ ಪೂರ್ವಭಾವಿ ಸಭೆಯ ಆಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕೋವಿಡ್-19 ಸೊಂಕು ದಿನೇ ದಿನ ವ್ಯಾಪಕವಾಗಿ ಹರಡುತ್ತಿದೆ. ಸೋಂಕಿಗೆ ಕಡಿವಾಣ ಹಾಕಲು ಸರಕಾರ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳು ನೀಡುವ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲಿಸುವುದರೊಂದಿಗೆ ಭಕ್ತಾಧಿಗಳು ಸೇವೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಬೇಕೆಂದು ತಿಳಿಸಿದರು.

ದೇವಾಲಯಗಳಿಗೆ ಬರುವ ಭಕ್ತಾಧಿಗಳು ಸಾಮಾಜಿಕ ಅಂತರ ಕಾಯ್ದು ಕೊಳ್ಳುವಂತೆ 6 ಅಡಿ ಅಂತರದ ಬಾಕ್ಸ್‌ಗಳ ಮಾರ್ಕ್‌ಗಳನ್ನು ಹಾಕ ಬೇಕು. ಪ್ರತಿಯೊಬ್ಬ ಭಕ್ತಾಧಿಗಳು ಮುಖಗವಸು ಧರಿಸಬೇಕು. ಥರ್ಮಲ್ ಸ್ಕ್ಯಾನಿಂಗ್ ಹಾಗೂ ಕೈ ತೊಳೆಯುವಿಕೆ ಅಥವಾ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡುವಂತೆ ನೋಡಿಕೊಳ್ಳಬೇಕು. ರಜಾದಿನಗಳಲ್ಲಿ ಹಬ್ಬಕ್ಕೆ ಹೆಚ್ಚು ಜನರು ಬರುವ ಸಾಧ್ಯತೆ ಇರುವ ಹಿನ್ನೆಲೆ ಯಲ್ಲಿ ಅಗತ್ಯವಿದ್ದಲ್ಲಿ ಪೊಲೀಸ್ ಇಲಾಖೆಯ ಸಹಾಯ ಪಡೆಯಬೇಕು ಎಂದರು.

ದೇವಾಲಯಗಳಲ್ಲಿ ಜಾತ್ರಾ ಉತ್ಸವಗಳು, ಬ್ರಹ್ಮೋತ್ಸವ, ಪವಿತ್ರೋತ್ಸವ ಮುಂತಾದ ವಿಶೇಷ ಉತ್ಸವಗಳನ್ನು ನಡೆಸುವುದನ್ನು ತಾತ್ಕಾಲಿಕ ವಾಗಿ ಮುಂದೂ ಡಲಾಗಿದೆ. ಈ ಉತ್ಸವಗಳನ್ನು ಆಯಾ ದೇವಾಲಯಗಳಲ್ಲಿ ಅಲ್ಲಿನ ತಂತ್ರಿಗಳು, ಆರ್ಚಕರು, ಸಿಬ್ಬಂದಿಗಳು ಸಾಂಕೇತಿಕವಾಗಿ ಒಳಪ್ರಕಾರದೊಳಗೆ ನಡೆಸಬೇಕು. ಸಾರ್ವಜನಿಕರ ಸಂದಣಿ ಇಲ್ಲದಂತೆ ಎಚ್ಚರವಹಿಸಬೇಕು ಎಂದರು.

65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಅನಾರೋಗ್ಯಪೀಡಿತರು, ಗರ್ಭಿಣಿಯರು ಹಾಗೂ 10 ವರ್ಷದ ಒಳಗಿನ ಮಕ್ಕಳು ಅಗತ್ಯ ಮತ್ತು ಆರೋಗ್ಯ ಉದ್ದೇಶಗಳನ್ನು ಹೊರತು ಪಡಿಸಿ ಮನೆಯಲ್ಲಿಯೆ ಇರಬೇಕೆಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ದೇವಾಲಯಗಳ ಸುತ್ತಮುತ್ತ ಕಾರ್ಯಕ್ರಮಗಳು ಮುಗಿದ ನಂತರ, ರಾತ್ರಿ ಮತ್ತು ಮಾರನೇ ದಿನದ ಬೆಳಗ್ಗೆ ಸಾನಿಟೈಸ್‌ಗೊಳಿಸಬೇಕು. ಸಾರ್ವಜನಿಕರಲ್ಲಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವ ಫಲಕಗಳನ್ನು ಅಳವಡಿಸುವಂತೆ ಸೂಚನೆ ನೀಡುವುದರೊಂದಿಗೆ ಕೋವಿಡ್ ನಿಯಮ ಪಾಲಿಸುವಂತೆ ಧ್ವನಿವರ್ಧಕದಲ್ಲಿ ಅಗಿಂದಾಗ್ಗೆ ಪ್ರಸಾರಮಾಡಬೇಕು ಎಂದು ಅವರು ತಿಳಿಸಿದರು.

ಈ ಹಿಂದೆ ದೇವಾಲಯಗಳಲ್ಲಿ ಅನ್ನಸಂತರ್ಪಣೆ ನಡೆಯುತಿದ್ದಲ್ಲಿ ಅದನ್ನು ಮುಂದುವರಿಸಿಕೊಂಡು ಹೋಗುವಂತೆ ತಿಳಿಸಿದ ಅವರು, ಹೊಸದಾಗಿ ಪ್ರಾರಂಭಿಸುವುದನ್ನು ತಪ್ಪಿಸಬೇಕು ಎಂದರು.

ದೇವಾಲಯಗಳ ಸುತ್ತಮುತ್ತ ಇರುವ ಅಂಗಡಿ ಹಾಗೂ ಹೊಟೇಲ್ ಮಾಲಕರ ಸಭೆಯನ್ನು ಕರೆದು ಅವರುಗಳು ಮುಖಗವಸನ್ನು ತಪ್ಪದೆ ಧರಿಸುವಂತೆ ಹಾಗೂ ಅಂಗಡಿಯ ಮುಂಭಾಗದಲ್ಲಿ ಸಾರ್ವಜನಿಕರು ಅಂತರ ಕಾಯ್ದು ಕೊಳ್ಳುವಂತೆನೋಡಿಕೊಳ್ಳಲು ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.

ಉಪವಿಭಾಗ ಅಧಿಕಾರಿಗಳು, ತಹಶೀಲ್ದಾರ್, ಪೊಲೀಸ್ ಇಲಾಖೆಯವರು ಧಾರ್ಮಿಕ ಸ್ಥಳಗಳಿಗೆ ಆಗಾಗ ಭೇಟಿ ನೀಡಿ ಸರಕಾರದ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳು ಪಾಲನೆಯಾಗುತ್ತಿರುವ ಬಗ್ಗೆ ಗಮನಿಸಬೇಕು. ತಪ್ಪಿದ್ದಲ್ಲಿ ಕಾನೂನಿನ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಜಿ.ಜಗದೀಶ್ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ತಹಶೀಲ್ದಾರ್ ಸುಧಾಕರ್ ಮತ್ತು ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X