Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್19 ಮಾರ್ಗಸೂಚಿಗಳ ಅನ್ವಯ 'ಏರೋ...

ಕೋವಿಡ್19 ಮಾರ್ಗಸೂಚಿಗಳ ಅನ್ವಯ 'ಏರೋ ಇಂಡಿಯಾ 2021' ಆಯೋಜನೆ: ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ7 Oct 2020 9:38 PM IST
share
ಕೋವಿಡ್19 ಮಾರ್ಗಸೂಚಿಗಳ ಅನ್ವಯ ಏರೋ ಇಂಡಿಯಾ 2021 ಆಯೋಜನೆ: ಸಿಎಂ ಯಡಿಯೂರಪ್ಪ

ಬೆಂಗಳೂರು, ಅ.7: ಕೇಂದ್ರದ ರಕ್ಷಣಾ ಉತ್ಪನ್ನಗಳ ಇಲಾಖೆಯು ರಾಜ್ಯ ಸರಕಾರದ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ 13ನೆ ಆವೃತ್ತಿಯ ಮೆಗಾ ಅಂತರ್‍ರಾಷ್ಟ್ರೀಯ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ 2021’ ಕಾರ್ಯಕ್ರಮಕ್ಕೆ ಸಂಬಂಧಿಸಿದ ರಾಯಭಾರಿಗಳ ದುಂಡು ಮೇಜಿನ ವರ್ಚುಯಲ್ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿ ಮಾತನಾಡಿದರು.

ಕಳೆದ ಹನ್ನೆರಡು ಏರ್ ಶೋ ಆವೃತ್ತಿಗಳಿಗೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಉತ್ತಮ ಅನುಭವವನ್ನು ಹೊಂದಿದೆ. 2021ರ ಫೆಬ್ರವರಿ 3ರಿಂದ 7ರವರೆಗೆ ಆಯೋಜಿಸಿರುವ 13ನೇ ಆವೃತ್ತಿಯ ಮೆಗಾ ಅಂತರ್‍ರಾಷ್ಟ್ರೀಯ ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಈ ಬಾರಿಯೂ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ ಎಂದು ಅವರು ಹೇಳಿದರು.

ಕೋವಿಡ್-19 ಸಾಂಕ್ರಾಮಿಕದ ನಡುವೆಯೂ ಇಂತಹ ಮಹತ್ವಪೂರ್ಣ ಕಾರ್ಯಕ್ರಮವನ್ನು ಆಯೋಜಿಸುವುದು ರಾಜ್ಯ ಹಾಗೂ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಒಂದು ಸವಾಲಿನ ವಿಷಯ. ಏರೋ ಇಂಡಿಯಾ 2021ರ ವೆಬ್‍ಸೈಟ್ ಪ್ರಾರಂಭವಾದ ಕೂಡಲೇ ವಸ್ತುಪ್ರದರ್ಶನಕ್ಕಾಗಿ ಈಗಾಗಲೇ ಆಸಕ್ತರು ಬಹುಪಾಲು ಸ್ಥಳವನ್ನು ಕಾಯ್ದಿರಿಸಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಸರಕಾರ ಅನೇಕ ಪೂರಕ ಕ್ರಮಗಳನ್ನು ಕೈಗೊಂಡಿದ್ದು, ಭಾರತ ಸರಕಾರದ ಆರೋಗ್ಯ ಸಚಿವಾಲಯದ ಎಲ್ಲ ಮಾರ್ಗಸೂಚಿಗಳನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಏರೋ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಂತರ್‍ರಾಷ್ಟ್ರೀಯ ಗಣ್ಯರು, ಅಧಿಕಾರಿ/ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಥರ್ಮಲ್ ಸ್ಕ್ರೀನಿಂಗ್, ಕಾಲಕಾಲಕ್ಕೆ ಸ್ಯಾನಿಟೈಸೇಷನ್ ಮತ್ತು ಸುರಕ್ಷಿತ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳುವುದು ಮುಂತಾದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಅವರು ಹೇಳಿದರು.

ಭಾರತದ ವೈಮಾನಿಕ ಮತ್ತು ಬಾಹ್ಯಾಕಾಶ ಉದ್ಯಮಕ್ಕೆ ಕರ್ನಾಟಕ ರಾಜ್ಯ ಶೇ.25 ರಷ್ಟು ಕೊಡುಗೆ ನೀಡುತ್ತಿದೆ. ಭಾರತದ ವೈಮಾನಿಕ ಸಂಬಂಧಿತ ರಫ್ತಿಗೆ ಶೇ.65ರಷ್ಟು ಹಾಗೂ ರಕ್ಷಣಾ ವಲಯದ ಸೇವೆಗಳಿಗಾಗಿ ಹೆಲಿಕಾಪ್ಟರ್ ಮತ್ತು ವಿಮಾನ ಉತ್ಪಾದನೆಗೆ ಶೇ.67ರಷ್ಟು ಕೊಡುಗೆ ನೀಡುತ್ತಿದೆ. ರಾಷ್ಟ್ರದಲ್ಲಿ ಏರೋಸ್ಪೇಸ್ ನೀತಿಯನ್ನು ರೂಪಿಸಿದ ಮೊಟ್ಟಮೊದಲ ರಾಜ್ಯ ಕರ್ನಾಟಕ. ಎಚ್‍ಎಎಲ್, ಬೆಮೆಲ್, ಬಿಇಎಲ್ ನಂತಹ ಪ್ರಮುಖ ಸಾರ್ವಜನಿಕ ವಲಯದ ಘಟಕಗಳು ಬೆಂಗಳೂರಿನಲ್ಲಿ ಸ್ಥಾಪಿತಗೊಂಡಿವೆ ಎಂದು ಮುಖ್ಯಮಂತ್ರಿ ಹೇಳಿದರು.

ಬೆಳಗಾವಿಯಲ್ಲಿ ಖಾಸಗಿ ಏರೋಸ್ಪೇಸ್ ಆರ್ಥಿಕ ವಲಯ, ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ 1000 ಎಕರೆ ಪ್ರದೇಶದಲ್ಲಿ ಏರೋಸ್ಪೇಸ್ ಪಾರ್ಕ್, ನಿರ್ವಹಣೆ ಮತ್ತು ದುರಸ್ತಿ ಕೇಂದ್ರ ಮತ್ತು ತುಮಕೂರು ಜಿಲ್ಲೆಯಲ್ಲಿ  ರಕ್ಷಣಾ ಉತ್ಪಾದನಾ ಕ್ಲಸ್ಟರ್ ಅನ್ನು ಕರ್ನಾಟಕ ಒಳಗೊಂಡಿದೆ. ಪ್ರಾದೇಶಿಕ ನಾಗರಿಕ ವಿಮಾನಯಾನ ಸೌಲಭ್ಯಗಳು ಮತ್ತು ನಿರ್ವಹಣೆ ಮತ್ತು ದುರಸ್ತಿ ಕೇಂದ್ರ ಸ್ಥಾಪನೆಗೆ ವಿಶೇಷ ಸಹಾಯಧನವನ್ನು ಹೂಡಿಕೆದಾರರಿಗೆ ಕರ್ನಾಟಕ ಒದಗಿಸುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತನಾಡಿ, ಅತಿಥಿ ದೇವೋಭವ ಎಂಬ ಮಾತಿನಲ್ಲಿ ನಂಬಿಕೆ ಇರುವವರು ನಾವು. ಶಾಂತಿಗಾಗಿ ರಕ್ಷಣಾ ಇಲಾಖೆಯನ್ನು ಇನ್ನಷ್ಟು ಸಬಲಗೊಳಿಸಲು ಪೂರಕವಾಗಿ ರಕ್ಷಣಾ ನೀತಿಯನ್ನು ಅಳವಡಿಸಿಕೊಳ್ಳುವುದೇ ನಮ್ಮ ಉದ್ದೇಶ ಎಂದರು.

ಭಾರತವು ಅತಿ ದೊಡ್ಡ ರಕ್ಷಣಾ ಉತ್ಪಾದನಾ ವಲಯವನ್ನು ಹೊಂದಿದೆ. ಏರೋ ಇಂಡಿಯಾ 2021 ಮೂಲಕ ಭಾರತ ವೈಮಾನಿಕ ಮತ್ತು ಬಾಹ್ಯಾಕಾಶ ಉದ್ಯಮದಲ್ಲಿ ಮುಂಚೂಣಿಯ ಐದು ರಾಷ್ಟ್ರಗಳಲ್ಲಿ ಒಂದಾಗಿರಬೇಕು ಎನ್ನುವುದು ನಮ್ಮ ಆಶಯ. ರಕ್ಷಣಾ ವಲಯದಲ್ಲಿ ಸಂಶೋಧನೆ ಮತ್ತು ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಖಾಸಗಿ ಮತ್ತು ಸಾರ್ವಜನಿಕ ವಲಯಗಳ ಸಕ್ರಿಯ ಭಾಗವಹಿಸುವಿಕೆಯಿಂದ ಭಾರತವನ್ನು ರಕ್ಷಣಾ ಉತ್ಪನ್ನಗಳ ಕೇಂದ್ರವಾಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ 19ರ ಹಿನ್ನೆಲೆಯಲ್ಲಿ ಸಂಪರ್ಕ ರಹಿತ ವ್ಯವಹಾರವನ್ನು ಖಾತ್ರಿಪಡಿಸಲು ಎಲ್ಲ ಅಗತ್ಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದರು.

ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್, ವಿವಿಧ ದೇಶಗಳ ರಾಯಭಾರಿಗಳು, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X