ಲಂಚ ಸ್ವೀಕಾರ ಆರೋಪ: ವಿಶೇಷ ತಹಶೀಲ್ದಾರ್ ಲಕ್ಷ್ಮೀಗೆ ಅ.20ರವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು, ಅ.7: ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದ ಬೆಂಗಳೂರು ದಕ್ಷಿಣ ತಾಲೂಕು ವಿಶೇಷ ತಹಶೀಲ್ದಾರ್ ಲಕ್ಷ್ಮೀಗೆ ಲೋಕಾಯುಕ್ತ ವಿಶೇಷ ಕೋರ್ಟ್ ಅ.20ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಬುಧವಾರ ಲೋಕಾಯುಕ್ತ ವಿಶೇಷ ಕೋರ್ಟ್ ಎದುರು ತಹಶೀಲ್ದಾರ್ ಲಕ್ಷ್ಮೀ ಅವರನ್ನು ಎಸಿಬಿ ಪೊಲೀಸರು ಹಾಜರುಪಡಿಸಿದರು. ಜಮೀನಿನ ಖಾತೆ ವರ್ಗಾವಣೆ ಮಾಡಲು ವ್ಯಕ್ತಿಯೊಬ್ಬರಿಂದ 5 ಲಕ್ಷಕ್ಕೆ ಬೇಡಿಕೆ ಇಟ್ಟಿರುವ ಮಾಹಿತಿ ಎಸಿಬಿ ಪೊಲೀಸರ ಗಮನಕ್ಕೆ ಬಂದಿತ್ತು.
ಮಂಗಳವಾರ 5 ಲಕ್ಷ ರೂ.ಸ್ವೀಕರಿಸುವಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಬೆ.ದಕ್ಷಿಣ ತಾಲೂಕು ವಿಶೇಷ ತಹಶೀಲ್ದಾರ್ ಲಕ್ಷ್ಮೀ, ಶಿರಸ್ತೇದಾರ್ ಪ್ರಸನ್ನಕುಮಾರ್, ಖಾಸಗಿ ವ್ಯಕ್ತಿ ಉಷಾರನ್ನ ಎಸಿಬಿ ಬಂಧಿಸಿತ್ತು. ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಎಸಿಬಿ ಎಫ್‍ಐಆರ್ ದಾಖಲಿಸಿದೆ.
Next Story





