Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ವಸಹಾಯ ಸಂಘಗಳ ಉತ್ಪನ್ನ ಮಾರಾಟಕ್ಕೆ...

ಸ್ವಸಹಾಯ ಸಂಘಗಳ ಉತ್ಪನ್ನ ಮಾರಾಟಕ್ಕೆ ಇ-ವೇದಿಕೆ: ಅಮೆಝಾನ್ ಭರವಸೆ

ವಾರ್ತಾಭಾರತಿವಾರ್ತಾಭಾರತಿ7 Oct 2020 11:47 PM IST
share

ಬೆಂಗಳೂರು, ಅ.7: ರಾಜ್ಯದಲ್ಲಿ ಸ್ವಸಹಾಯ ಗುಂಪುಗಳು ಉತ್ಪಾದಿಸುತ್ತಿರುವ ಉತ್ಪನ್ನಗಳ ಇ-ಮಾರಾಟಕ್ಕೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಅಮೆಝಾನ್ ಕಂಪನಿ ಭರವಸೆ ನೀಡಿದೆ.

ಅಮೆಝಾನ್ ಕಂಪನಿ ಉಪಾಧ್ಯಕ್ಷ (ಸಾರ್ವಜನಿಕ ಕಾರ್ಯನೀತಿ ವಿಭಾಗ) ಚೇತನ್ ಕೃಷ್ಣಸ್ವಾಮಿ ಬುಧವಾರ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಲಾಯಿತು.

ಉಪ ಮುಖ್ಯಮಂತ್ರಿಯ ಮನವಿಗೆ ಪ್ರತಿಕ್ರಿಯಿಸಿದ ಚೇತನ್ ಕೃಷ್ಣಸ್ವಾಮಿ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸ್ವಸಹಾಯ ಗುಂಪುಗಳಿಗೆ ಅಮೆಝಾನ್, ಇ-ಮಾರುಕಟ್ಟೆ ವೇದಿಕೆಯನ್ನು ಒದಗಿಸಲಿದೆ. ಈ ಕುರಿತು ಸರಕಾರದ ಜತೆ ಮಾತುಕತೆ ನಡೆಸಲಾಗುವುದು ಎಂದರು.

ರಾಜ್ಯದಲ್ಲಿ ಸುಮಾರು 1.5 ಲಕ್ಷ ಸ್ವಸಹಾಯ ಗುಂಪುಗಳು ಇವೆ. ಇವುಗಳು ವಿವಿಧ ಉತ್ಪನ್ನಗಳ ತಯಾರಿಕೆ, ಸಿದ್ಧಪಡಿಸುವಿಕೆ ಹಾಗೂ ಉತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ. ಈ ಉತ್ಪನ್ನಗಳಿಗೆ ಎಲೆಕ್ಟ್ರಾನಿಕ್ ವ್ಯಾಪಾರ ವೇದಿಕೆಗಳ ಮೂಲಕ ಮಾರಾಟಕ್ಕೆ ಅನುವು ಮಾಡಿಕೊಡುವುದು ಸೂಕ್ತ ಎಂದು ಅಶ್ವತ್ಥ ನಾರಾಯಣ ಅಭಿಪ್ರಾಯಪಟ್ಟರು.

ಇದೇ ವೇಳೆ ಚೇತನ್ ಕೃಷ್ಣಸ್ವಾಮಿ ಮಾತನಾಡಿ, ಅಮೆಝಾನ್ ಕಂಪನಿಯು ಭಾರತದಲ್ಲಿ ತನ್ನ ಕಾರ್ಯಚಟುವಟಿಕೆಯನ್ನು ವಿಸ್ತರಿಸುವ ಯೋಜನೆಗಳನ್ನು ಹೊಂದಿದೆ. ಪೂರೈಕೆ ಸರಪಳಿ, ದಾಸ್ತಾನು ಘಟಕ ಮತ್ತಿತರ ವಿಭಾಗಗಳಲ್ಲಿ ಗ್ರಾಮೀಣ ಹಾಗೂ ಸ್ಥಳೀಯ ಯುವ ಜನತೆಗೆ ಹೆಚ್ಚಿನ ಉದ್ಯೋಗ ನೀಡುವ ಉದ್ದೇಶ ಹೊಂದಿದೆ. ಜೊತೆಗೆ ಸಂಸ್ಥೆಯ ಸಿಬ್ಬಂದಿಗೆ ಕಾಲಕಾಲಕ್ಕೆ ಕೌಶಲಾಭಿವೃದ್ಧಿ ತರಬೇತಿ ನೀಡಲು ಒತ್ತು ಕೊಡಲಾಗುತ್ತದೆ ಎಂದರು.

ನಾವೀನ್ಯತೆಯನ್ನು ಪೋಷಿಸುವ, ಉದ್ಯೋಗಗಳನ್ನು ಸೃಷ್ಟಿಸುವ ಹಾಗೂ ಭಾರತದ ವ್ಯಾಪಾರಗಳನ್ನು ಜಾಗತಿಕ ಮಾರುಕಟ್ಟೆಗೆ ತಲುಪಿಸುವ ಗುರಿಯನ್ನು ಅಮೆಝಾನ್ ಕಂಪನಿ ಹೊಂದಿದೆ. 10 ಲಕ್ಷ ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಗಾತ್ರದ ಉದ್ದಿಮೆಗಳನ್ನು ಡಿಜಿಟಲೀಕರಣಗೊಳಿಸುವ ಗುರಿಯನ್ನೂ ಹೊಂದಲಾಗಿದೆ. ಇದರಿಂದ 10 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಜೊತೆಗೆ, ಭಾರತದ ಇ-ವಾಣಿಜ್ಯ ರಫ್ತು ಮೊತ್ತವು 2025 ರ ವೇಳೆಗೆ ಸುಮಾರು 75 ಸಾವಿರ ಕೋಟಿ ರೂ. ಗಳಾಗಲಿದೆ ಎಂದು ಅವರು ತಿಳಿಸಿದರು.

ಮುಂದಿನ ಹಂತದಲ್ಲಿ ಆನ್ ಲೈನ್ ಮೂಲಕ ಉಪ ಮುಖ್ಯಮಂತ್ರಿಯ ಜೊತೆ ಬೇರೆ ಬೇರೆ ರಾಷ್ಟ್ರಗಳಲ್ಲಿ ಇರುವ ಅಮೆಝಾನ್ ಕಂಪನಿಯ ಪ್ರಮುಖ ಅಧಿಕಾರಿಗಳ ಸಭೆ ನಡೆಸುವ ಉದ್ದೇಶ ಹೊಂದಿರುವುದಾಗಿಯೂ ಚೇತನ್ ಕೃಷ್ಣಸ್ವಾಮಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X