ಮಾಸ್ಕ್ ಧರಿಸದಿದ್ದರೆ ದಂಡ : ಜಿಲ್ಲಾಧಿಕಾರಿ ಎಚ್ಚರಿಕೆ
ಮಂಗಳೂರು, ಅ.8: ದ.ಕ. ಜಿಲ್ಲಾ ವ್ಯಾಪ್ತಿಗೆ ಸಂಬಂಧಿಸಿ ಎಲ್ಲಾ ಸಾರ್ವಜನಿಕ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ವೇಳೆ ಮುಖದ ಹೊದಿಕೆ ಯನ್ನು ಧರಿಸುವುದು ಕಡ್ಡಾಯವಾಗಿದೆ. ಸರಿಯಾದ ಕ್ರಮದಲ್ಲಿ ಮುಖದ ಹೊದಿಕೆಯನ್ನು ಧರಿಸದಿದ್ದಲ್ಲಿ ಮನಪಾ ವ್ಯಾಪ್ತಿಯಲ್ಲಿ 250 ರೂ.ಮತ್ತು ಇನ್ನುಳಿದ ಪ್ರದೇಶಗಳಲ್ಲಿ ರೂ.100 ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
Next Story





