Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಸಂಸದರಿಂದ ದ್ವೇಷ ಭಾಷಣ: ಆರೋಪ

ಬಿಜೆಪಿ ಸಂಸದರಿಂದ ದ್ವೇಷ ಭಾಷಣ: ಆರೋಪ

ಎಫ್‌ಐಆರ್ ದಾಖಲಿಸಲು ಆದೇಶಿಸುವಂತೆ ನ್ಯಾಯಾಲಯದಲ್ಲಿ ಬೃಂದಾ ಕಾರಟ್ ಮನವಿ

ವಾರ್ತಾಭಾರತಿವಾರ್ತಾಭಾರತಿ8 Oct 2020 9:28 PM IST
share
ಬಿಜೆಪಿ ಸಂಸದರಿಂದ ದ್ವೇಷ ಭಾಷಣ: ಆರೋಪ

ಹೊಸದಿಲ್ಲಿ, ಅ. 8: ದಿಲ್ಲಿಯ ಶಾಹೀನ್‌ಬಾಗ್‌ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗೆ ಸಂಬಂಧಿಸಿ ದ್ವೇಷ ಭಾಷಣ ಮಾಡಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್, ಬಿಜೆಪಿಯ ಅವರ ಸಹೋದ್ಯೋಗಿ ಹಾಗೂ ಸಂಸದ ಪ್ರವೇಶ್ ವರ್ಮಾ ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಸಿಪಿಎಂ ನಾಯಕಿ ಬೃಂದಾ ಕಾರಟ್ ದಿಲ್ಲಿ ಉಚ್ಚ ನ್ಯಾಯಾಲಯದಲ್ಲಿ ಗುರುವಾರ ಪ್ರತಿಪಾದಿಸಿದ್ದಾರೆ.

ಸಂಬಂಧಿತ ಪ್ರಾಧಿಕಾರವಾದ ಕೇಂದ್ರ ಸರಕಾರದಿಂದ ಅಗತ್ಯದ ಅನುಮತಿ ಪಡೆಯಲಿಲ್ಲ ಎಂಬ ಕಾರಣಕ್ಕೆ ಇಬ್ಬರು ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಕೋರಿ ಬೃಂದಾ ಕಾರಟ್ ಅವರು ಸಲ್ಲಿಸಿದ್ದ ಮನವಿಯನ್ನು ವಿಚಾರಣಾ ನ್ಯಾಯಾಲಯ ಆಗಸ್ಟ್ 26ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಬೃಂದಾ ಕಾರಟ್ ಈ ಮೇಲ್ಮನವಿ ಸಲ್ಲಿಸಿದ್ದಾರೆ.

ಮನವಿ ಆಲಿಸಿದ ಬಳಿಕ ನ್ಯಾಯಮೂರ್ತಿ ಯೋಗೇಶ್ ಖನ್ನಾ, ತಮ್ಮ ವಾದಕ್ಕೆ ಬೆಂಬಲವಾಗಿ ಸಂಬಂಧಿತ ತೀರ್ಪುಗಳನ್ನು ಸಲ್ಲಿಸುವಂತೆ ಬೃಂದಾ ಕಾರಟ್ ಹಾಗೂ ದಿಲ್ಲಿ ಪೊಲೀಸರ ಪರ ವಕೀಲರಿಗೆ ತಿಳಿಸಿದರು. ನ್ಯಾಯಾಲಯ ಈ ಪ್ರಕರಣದ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿತು. ಪೊಲೀಸರ ಪರವಾಗಿ ಹಾಜರಾಗಿದ್ದ ನ್ಯಾಯವಾದಿ ರಿಚಾ ಕಪೂರ್, ಮನವಿಯ ಸಮರ್ಥನೀಯತೆಯನ್ನು ಪ್ರಶ್ನಿಸಿದರು. ಮನವಿಯನ್ನು ವಿಚಾರಣಾ ನ್ಯಾಯಾಲಯದಲ್ಲಿ 9 ತಿಂಗಳು ಬಾಕಿ ಇರಿಸಲಾಗಿತ್ತು. ಅನಂತರ ಮ್ಯಾಜಿಸ್ಟ್ರೇಟ್ ಮನವಿಯನ್ನು ತಿರಸ್ಕರಿಸಿದರು. ಮನವಿಯ ಅರ್ಹತೆಯನ್ನು ಪರಿಶೀಲಿಸುವುದಕ್ಕೆ ಕೂಡ ಹೋಗಿಲ್ಲ ಎಂದು ಬೃಂದಾ ಕಾರಟ್ ಪರ ನ್ಯಾಯವಾದಿ ಸಿದ್ಧಾರ್ಥ್ ಅಗರ್ವಾಲ್ ಹೇಳಿದರು. ಬಿಜೆಪಿ ನಾಯಕರು ಸಂಜ್ಞೇಯ ಅಪರಾಧ ಮಾಡಿದ್ದಾರೆ ಹಾಗೂ ನಾವು ಈ ವಿಷಯದ ಕುರಿತು ಪೊಲೀಸ್ ತನಿಖೆ ನಡೆಸುವಂತೆ ಮಾತ್ರ ಮನವಿ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ಅನುರಾಗ್ ಠಾಕೂರ್ ಹಾಗೂ ಪ್ರವೇಶ್ ವರ್ಮಾ ವಿರುದ್ಧ ಪಾರ್ಲಿಮೆಂಟ್ ಸ್ಟ್ರೀಟ್‌ನ ಪೊಲೀಸ್ ಠಾಣೆ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ಕೋರಿ ಸಿಪಿಎಂ ನಾಯಕರಾದ ಬೃಂದಾ ಕಾರಟ್ ಹಾಗೂ ಕೆ.ಎಂ. ತಿವಾರಿ ವಿಚಾರಣಾ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆದರೆ, ಪೂರ್ವಾನುಮತಿ ಇಲ್ಲದೆ ಮನವಿ ಸಲ್ಲಿಕೆ ಸಮರ್ಥನೀಯವಲ್ಲ ಎಂದು ವಿಚಾರಣಾ ನ್ಯಾಯಾಲಯ ಮನವಿಯನ್ನು ತಿರಸ್ಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X