ರೈತರಿಗೆ ಜೇನು ಕೃಷಿ ತರಬೇತಿ
ಉಡುಪಿ, ಅ.8: ತೋಟಗಾರಿಕಾ ಇಲಾಖೆ ವತಿಯಿಂದ ಜೇನುಕೃಷಿ ತರಬೇತಿ ಕಾರ್ಯಕ್ರಮ ಅ.14 ಮತ್ತು 15ರಂದು ಬೆಳಗ್ಗೆ 11 ಗಂಟೆಗೆ ದೊಡ್ಡಣಗುಡ್ಡೆ ಯಲ್ಲಿರುವ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಆವರಣದಲ್ಲಿ ನಡೆಯಲಿದೆ.
ಆಸಕ್ತ ರೈತರುಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0820-2522837ನ್ನು ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story





