ಮಕ್ಕಳ ಜೀವನದ ಜೊತೆ ಚೆಲ್ಲಾಟ ಬೇಡ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು,ಅ.8: ಕೊರೋನ ಆತಂಕದ ನಡುವೆ ಶಾಲೆ ಆರಂಭಿಸುವುದು ಸೂಕ್ತವಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ಕುರಿತಂತೆ ಪೋಷಕರಲ್ಲಿ ಆತಂಕವಿದೆ. ಮಕ್ಕಳ ಜೀವನದ ಜೊತೆ ಚೆಲ್ಲಾಟ ಬೇಡ. ಸರಕಾರ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.
ಸದ್ಯಕ್ಕೆ ಶಾಲಾ-ಕಾಲೇಜುಗಳ ಆರಂಭ ಬೇಡ. ಸೂಕ್ತ ಸಿದ್ಧತೆ ಇಲ್ಲದೆ, ಶಾಲಾ-ಕಾಲೇಜು ಆರಂಭಿಸಬೇಡಿ ಎಂದು ರಾಜ್ಯ ಸರಕಾರಕ್ಕೆ ಕುಮಾರಸ್ವಾಮಿ ಸಲಹೆ ನೀಡಿದರು.
Next Story





