Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಕೋವಿಡ್...

ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಕೋವಿಡ್ 19 ಪ್ರಮಾಣವನ್ನು ತಗ್ಗಿಸಲು ಮುಖ್ಯಮಂತ್ರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 Oct 2020 10:47 PM IST
share
ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಕೋವಿಡ್ 19 ಪ್ರಮಾಣವನ್ನು ತಗ್ಗಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು, ಅ.8: ಕೋವಿಡ್ 19 ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಿ, ಗುರಿಯಾಧಾರಿತ (ಟಾರ್ಗೆಟ್) ಪರೀಕ್ಷೆಗಳನ್ನು ಮಾಡಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸಾಂಕ್ರಾಮಿಕ ರೋಗ ತಡೆ ಹಾಗೂ ಸಾವಿನ ಪ್ರಮಾಣ ತಡೆಯಲು ಹೆಚ್ಚಿನ ಮುತುವರ್ಜಿ ವಹಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. 

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿರುವ ಹತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿ.ಇ.ಒಗಳೊಂದಿಗೆ ಅವರು ವೀಡಿಯೋ ಸಂವಾದ ನಡೆಸಿದರು.

ಸಾಂಕ್ರಾಮಿಕ ರೋಗಕ್ಕೆ ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡುವುದು ಮತ್ತು ಸಾಮಾಜಿಕ ಅಂತರವೇ ಮದ್ದು ಎಂಬುದನ್ನು ಜನರು ಅರಿಯಬೇಕು; ಮಾಸ್ಕ್ ಹಾಕದವರಿಗೆದಂಡ ವಿಧಿಸುವುದು ಅರಿವಿನ ಒಂದು ಭಾಗವೇ ಹೊರತು ಸರಕಾರಕ್ಕೆ ಇದರಿಂದ ಬೇರೆ ಉದ್ದೇಶ ಇಲ್ಲ ಎಂಬುದನ್ನು ಜನತೆಗೆ ಮನಗಾಣಿಸಬೇಕು ಎಂದು ಅವರು ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದರು. 

ಜನ ಜಾಗೃತಿ ಮುಖಾಂತರ ಮುನ್ನೆಚ್ಚರಿಕೆಯೊಂದಿಗೆ ರೋಗ ತಡೆಯಲು ಸೂಕ್ತ ಕ್ರಮಕೈಗೊಳ್ಳಬೇಕಿದೆ. ಈ ಸಂಬಂಧ ಅಗತ್ಯಗಳಿದ್ದರೆ ಹಿಂಜರಿಯದೆ ನೇರವಾಗಿ ಹೇಳಿ; ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲು ಸರಕಾರ ಬದ್ಧವಾಗಿದ್ದು, ಪಡೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಕೋವಿಡ್ 19 ಸಂಬಂಧಿಸಿದ ಎಸ್.ಒ.ಪಿಗಳನ್ನು ಪಾಲಿಸಿ, ಮರಣ ಪ್ರಮಾಣ ಹೆಚ್ಚದಂತೆ ಕಾಳಜಿ ವಹಿಸಿ ಎಂದು ಅವರು ಹೇಳಿದರು.

ಕೋವಿಡ್ 19 ಪ್ರಕರಣಗಳು ಹೆಚ್ಚಾಗಿರುವ ಬಳ್ಳಾರಿ, ದಕ್ಷಿಣ ಕನ್ನಡ, ಹಾಸನ, ಧಾರವಾಡ, ಬೆಳಗಾವಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತುಲನಾತ್ಮಕ ಅಧ್ಯಯನದೊಂದಿಗೆ ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. 

ಡೆತ್ ಆಡಿಟ್ ಬಗ್ಗೆ ಪರಿಶೀಲಿಸಿದ ಮುಖ್ಯ ಮಂತ್ರಿ, ಧಾರವಾಡ ಜಿಲ್ಲೆಯಲ್ಲಿ ಮರಣ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಒಂದು ವಿಶೇಷ ತಂಡವನ್ನು ಕಳುಹಿಸಲು ಸೂಚಿಸಿದರು. 

ಈ ಸಂಬಂಧ ಲೋಪಗಳನ್ನು ತಿದ್ದಿಕೊಂಡು ಎಲ್ಲರ ಸಹಕಾರದೊಂದಿಗೆ ರೋಗ ಪ್ರಮಾಣ ಮತ್ತು ಮರಣ ಪ್ರಮಾಣಕ್ಕೆ ಕಡಿವಾಣ ಹಾಕಲು ಸಭೆಯಲ್ಲಿ ಸೂಕ್ತ ನಿರ್ದೇಶನಗಳನ್ನು ಮುಖ್ಯಮಂತ್ರಿ ನೀಡಿದರು. 

ಜಿಲ್ಲೆಗಳಲ್ಲಿ ಆರ್.ಎ.ಟಿ ಪರೀಕ್ಷೆಗಳನ್ನು ಹೆಚ್ಚು ಮಾಡುತ್ತಿದ್ದು, ಇದನ್ನು ಕಡಿಮೆ ಮಾಡಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗಳನ್ನು ಹೆಚ್ಚು ಮಾಡಬೇಕು ಎಂದು ಸೂಚಿಸಲಾಯಿತು. ಮನೆ ಆರೈಕೆಯಲ್ಲಿರುವವರಿಗೆ ಟೆಲಿ ಮಾನಿಟರಿಂಗ್ ಮುಖಾಂತರ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ  ಮಾಡಬೇಕು ಹಾಗೂ ಆರೋಗ್ಯ ಕಿಟ್‍ಗಳನ್ನು ನೀಡಲು ಅವರು ಸೂಚಿಸಿದರು. 

ಪಾಸಿಟಿವ್ ಪ್ರಕರಣಗಳನ್ನು ಕಡಿಮೆ ಮಾಡಲು ಸಮೀಕ್ಷೆ ಮಾಡಿ ತಪಾಸಣೆ ಕೈಗೊಳ್ಳಬೇಕು. ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗಳನ್ನು ಹೆಚ್ಚು ಮಾಡಬೇಕು. ಅನಿವಾರ್ಯ ಇದ್ದಲ್ಲಿ ಮಾತ್ರ ಆರ್.ಎ.ಟಿ ಪರೀಕ್ಷೆ ಮಾಡಬೇಕೆಂದು ಮುಖ್ಯಮಂತ್ರಿ ಹೇಳಿದರು. 

ಆಸ್ಪತ್ರೆಗಳಲ್ಲಿ ದಾಖಲಾದ ನಂತರ 72 ಗಂಟೆಗಳೊಳಗೆ ಆಗಿರುವ ಮರಣಗಳ ಕಾರಣವನ್ನು ತಿಳಿಯಲು ಮರಣಗಳ ಆಡಿಟ್ ಮಾಡಬೇಕು. ರಾಜ್ಯದಲ್ಲಿ ಶೇ 50 ರಷ್ಟು ಮರಣಗಳು ಮೊದಲ 72 ಗಂಟೆಗಳಲ್ಲಿ ಆಗಿವೆ. ಹಾಗಾಗಿ ಪರೀಕ್ಷೆಗಳನ್ನು ಮಾಡಿ ಸೋಂಕು ಪತ್ತೆ ಹಚ್ಚುವುದು ಅತಿ ಮುಖ್ಯ ಎಂದು ಅವರು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕು. ಕ್ಲಿನಿಕಲ್ ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು. 

ಮೈಸೂರು ಜಿಲ್ಲೆಯಲ್ಲಿ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದು, ಮುಂದಿನ ಒಂದು ವಾರದೊಳಗೆ ಪ್ರತ್ಯೇಕ ವರದಿಯನ್ನು ನೀಡಬೇಕು. ದಸರಾ ಕಾರ್ಯಕ್ರಮಗಳು ವರ್ಚುಯಲ್ ಆಗಿ  ನಡೆಯಲಿ.  ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. 

ಶಿವಮೊಗ್ಗ ಜಿಲ್ಲೆಯಲ್ಲಿ ಶೇ.20 ರಷ್ಟಿದ್ದ ಕೋವಿಡ್ ಪ್ರಕರಣಗಳನ್ನು ಕಳೆದ ವಾರಗಳಲ್ಲಿ ಶೇ.6 ಕ್ಕೆ ಇಳಿಸಲಾಗಿದೆ. ಇದನ್ನು ಇನ್ನಷ್ಟು ಕಡಿಮೆ ಮಾಡಿದಲ್ಲಿ ರಾಜ್ಯಕ್ಕೇ ಮಾದರಿಯಾಗಬಹುದು ಎಂದು ಅವರು ಹೇಳಿದರು.  

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರೋಗ್ಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X