ಕಲಬುರಗಿ: ಬೆಂಕಿ ಹಚ್ವಿಕೊಂಡು ರೈತ ಆತ್ಮಹತ್ಯೆ
ಕಲಬುರಗಿ, ಅ.8: ರೈತನೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೇಡಂ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಸವರಾಜ್(48) ಆತ್ಮಹತ್ಯೆ ಮಾಡಿಕೊಂಡಿರುವ ರೈತ ಎಂದು ಗುರುತಿಸಲಾಗಿದೆ. ಬಸವರಾಜ್, ಖಾಸಗಿಯಾಗಿ ಮತ್ತು ಬ್ಯಾಂಕ್‍ನಲ್ಲಿ ಆರು ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಅತಿವೃಷ್ಟಿಯಿಂದ ಬೆಳೆ ಹಾಳಾದ ಹಿನ್ನೆಲೆಯಲ್ಲಿ ನೊಂದಿದ್ದ ರೈತ ಅನ್ಯ ಮಾರ್ಗ ಕಾಣದೆ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಸೇಡಂ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Next Story





