ಶಾಲೆ ಆರಂಭಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಶಿಕ್ಷಣ ತಜ್ಞ ದೊರೆಸ್ವಾಮಿ ಸಲಹೆ ಏನು ?
ಬೆಂಗಳೂರು, ಅ.9: ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮೊದಲಿಗೆ ಪಿಯು ಕಾಲೇಜುಗಳನ್ನು ಪ್ರಾರಂಭಿಸಲಿ. ಆ ನಂತರ ಶಾಲೆಗಳು ಆರಂಭವಾಗಲಿ ಎಂದು ಶಿಕ್ಷಣ ತಜ್ಞ ಎಂ.ಆರ್.ದೊರೆಸ್ವಾಮಿ ಸಲಹೆ ನೀಡಿದ್ದಾರೆ.
ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪತ್ರ ಬರೆದಿರುವ ಅವರು, ಕಾಲೇಜು ವಿದ್ಯಾರ್ಥಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ. ಹಾಗೂ ಈ ಹಂತದ ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ಮತ್ತು ಕೋವಿಡ್ ನಿಯಮಗಳ ಬಗ್ಗೆ ಅರಿವಿರುತ್ತದೆ ಎಂದು ತಿಳಿಸಿದ್ದಾರೆ.
ಶಾಲೆಗಳ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳನ್ನು ತಂಡಗಳಾಗಿ ವಿಭಾಗಿಸಿ, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ದಿನಬಿಟ್ಟು ದಿನ ತರಗತಿಗಳನ್ನು ನಡೆಸುವುದು ಉತ್ತಮವೆಂದು ಅವರು ಅಭಿಪ್ರಾಯಿಸಿದ್ದಾರೆ.
Next Story





