Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರೀಕ್ಷಾ ಕೇಂದ್ರದಲ್ಲಿ ಕೊರೋನ ಮುಂಜಾಗೃತಾ...

ಪರೀಕ್ಷಾ ಕೇಂದ್ರದಲ್ಲಿ ಕೊರೋನ ಮುಂಜಾಗೃತಾ ಕ್ರಮ ಪಾಲಿಸಿ : ಅಪರ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ9 Oct 2020 8:05 PM IST
share
ಪರೀಕ್ಷಾ ಕೇಂದ್ರದಲ್ಲಿ ಕೊರೋನ ಮುಂಜಾಗೃತಾ ಕ್ರಮ ಪಾಲಿಸಿ : ಅಪರ ಜಿಲ್ಲಾಧಿಕಾರಿ

ಉಡುಪಿ, ಅ.9: ಇದೇ ಅ.13 ಹಾಗೂ 14ರಂದು ನಡೆಯಲಿರುವ ಡಿಪ್ಲೋಮಾ ಹಾಗೂ ಪಿಜಿಸಿಇಟಿ ಪರೀಕ್ಷೆಯ ವೇಳೆ ಕೋವಿಡ್ ಸೋಂಕು ತಡೆಗೆ ಸರಕಾರ ಹೊರಡಿಸಿರುವ ಎಲ್ಲಾ ಅಗತ್ಯ ಮುಂಜಾಗೃತ ಕ್ರಮಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ದಾಶಿವ ಪ್ರಭು ಸೂಚನೆ ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಡಿಪ್ಲೋಮಾ ಮತ್ತು ಪಿಜಿಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕೋವಿಡ್ ಸೋಂಕು ಹೆಚ್ಚು ಹರಡುತ್ತಿರುವ ಈ ಸಮಯದಲ್ಲಿ ನಡೆಯು ತ್ತಿರುವ ಪರೀಕ್ಷೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕೆಂದು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಈಗಾಗಲೇ ಈ ರೀತಿಯ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಿರುವ ಅನುಭವವಿದ್ದು, ಅದೇ ರೀತಿಯಲ್ಲಿ ಈ ಪರೀಕ್ಷೆಗಳನ್ನೂ ನಡೆಸ ಬೇಕು. ಪರೀಕ್ಷಾ ಕೇಂದ್ರದ ಹೊರ ಭಾಗದಲ್ಲಿ ಹಾಗೂ ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವಂತೆ ಶಿಕ್ಷಕರು ಎಚ್ಚರ ವಹಿಸಬೇಕೆಂದು ತಿಳಿಸಿದರು.

ಕೋವಿಡ್ ಪಾಸಿಟಿವ್ ಬಂದ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೇಂದ್ರಗಳನ್ನು ಗುರುತಿಸಬೇಕು. ಅಲ್ಲಿ ಸಿಸಿಟಿ ಕ್ಯಾಮರಾವನ್ನು ಅಳವಡಿಸುವುದರ ಜೊತೆಗೆ ಜಿಲ್ಲಾ ಆರೋಗ್ಯ ಪ್ರಾಧಿಕಾರದಿಂದ ಅವಶ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಪರೀಕ್ಷೆ ಮುಗಿದ ನಂತರ ಪ್ರತೀದಿನ ಸಂಜೆ ಪರೀಕ್ಷಾ ಕೇಂದ್ರಗಳಿಗೆ ಸೋಂಕು ನಿವಾರಣಾ ದ್ರವಣವನ್ನು ಸಿಂಪಡಿಸಬೇಕು ಪ್ರತೀ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕಾನಿಂಗ್ ಮಾಡಬೇಕು. ಅಲ್ಲದೇ ಪ್ರತಿಯೊಬ್ಬ ವಿದ್ಯಾರ್ಥಿ ತಪ್ಪದೇ ಮುಖಗವಸು ಧರಿಸಬೇಕು ಎಂದು ತಿಳಿಸಿದರು.

ಕೋವಿಡ್ ಸೋಂಕಿತ ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆ: 0820-2574802 ಹಾಗೂ ಟೋಲ್ ಫ್ರೀ ಸಂಖ್ಯೆ 1077 ಗೆ ಕರೆ ಮಾಡಿದಲ್ಲಿ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಭಗವಂತ ಕಟ್ಟಿಮನಿ, ತಹಶೀಲ್ದಾರ ಪ್ರದೀಪ್ ಎಸ್ ಕುರುಡೇಕರ್, ಖಜಾನೆ ಇಲಾಖೆ ಉಪನಿರ್ದೇಶಕ ಗೋಪಾಲ ಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಬಿ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X