ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ
ಉಡುಪಿ, ಅ.9: ಮುಂದಿನ ಎರಡು ದಿನಗಳ ಕಾಲ ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಗುಡುಗು ಮಿಂಚುಗಳ ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆಯ ಬೆಂಗಳೂರು ಹವಾಮಾನ ಕೇಂದ್ರ ನೀಡಿದೆ.
ಅ.10 ಹಾಗೂ 11ರಂದು ಕರ್ನಾಟಕ ಕರಾವಳಿಯಾದ್ಯಂತ ಬಿರುಗಾಳಿ ಯೊಂದಿಗೆ ಮಳೆ ಸುರಿಯಲಿದ್ದು, 12ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇದು ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಯಲ್ಲಿ ತಿಳಿಸಲಾಗಿದೆ.
Next Story





