ಮೆಟ್ರಿಕ್ ನಂತರದ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿಗಳ ಆಹ್ವಾನ
ಉಡುಪಿ, ಅ.9: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿವರೆಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಹಾಗೂ ತಾಂತ್ರಿಕ ಮತ್ತು ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್-ಕಂ- ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್-https://scholarships.gov.in - ಮೂಲಕ ಅರ್ಜಿಯನ್ನು ಅಕ್ಟೋಬರ್ 31ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್- https://dom.karnataka.gov.in - ಅಥವಾ ತಾಲೂಕುಗಳ ದೂರವಾಣಿ ಸಂಖ್ಯೆ: 0820-2574596(ಉಡುಪಿ), 08254-230370 (ಕುಂದಾಪುರ), 08258-231101 (ಕಾರ್ಕಳ) ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.





