ಉಡುಪಿ: 191 ಮಂದಿಯಲ್ಲಿ ಕೊರೋನ ಸೋಂಕು ದೃಢ, ಒಬ್ಬರು ಬಲಿ

ಉಡುಪಿ, ಅ.9: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 191 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಕೊರೋನಕ್ಕೆ ಪಾಸಿಟಿವ್ ಆದವರ ಸಂಖ್ಯೆ 18,997ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ಮಕ್ಕಳು ಸೇರಿದಂತೆ 118 ಮಂದಿ ಪುರುಷರು ಹಾಗೂ 73 ಮಂದಿ ಮಹಿಳೆಯರಾಗಿದ್ದಾರೆ. ಇವರಲ್ಲಿ 38 ಪುರು ಷರು ಹಾಗೂ 21 ಮಂದಿ ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣ ಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 91, ಕುಂದಾಪುರ ತಾಲೂಕಿನ 48 ಹಾಗೂ ಕಾರ್ಕಳ ತಾಲೂಕಿನ 35 ಮಂದಿ ಶುಕ್ರವಾರ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಉಳಿದ 17 ಮಂದಿ ಹೊರ ಜಿಲ್ಲೆಯಿಂದ ಚಿಕಿತ್ಸೆಗೆ ಬಂದು ಇಲ್ಲಿ ಪಾಸಿಟಿವ್ ಬಂದವರು ಎಂದು ಡಾ.ಸೂಡ ಹೇಳಿದ್ದಾರೆ.
ದಿನದಲ್ಲಿ 225 ಮಂದಿ ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆ ಗಳಿಂದ ಬಿಡುಗಡೆಗೊಂಡಿದ್ದು, ಹೀಗೆ ಮನೆಗೆ ತೆರಳಿದವರ ಒಟ್ಟು ಸಂಖ್ಯೆ 16,917ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 1952 ಸಕ್ರೀಯ ಕೋವಿಡ್ ಪ್ರಕರಣಗಳಿವೆ.
1982 ನೆಗೆಟಿವ್: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 2161 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 1982 ಮಂದಿ ನೆಗೆಟಿವ್ ಆಗಿದ್ದು, 191 ಮಂದಿ ಮಾತ್ರ ಪಾಸಿಟಿವ್ ಬಂದಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,40,812 ಮಂದಿಯನ್ನು ಪರೀಕ್ಷೆ ಗೊಳಪಡಿಸಿದ್ದು ಇವರಲ್ಲಿ 1,21,827 ಮಂದಿ ನೆಗೆಟಿವ್ ಬಂದಿದ್ದಾರೆ. 18997 ಮಂದಿ ಈವರೆಗೆ ಪಾಸಿಟಿವ್ ಬಂದಿದ್ದಾರೆ. ಇವರಲ್ಲಿ 16,917 ಮಂದಿ ಗುಣಮುಖ ರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದಾ್ದರೆ. 163 ಮಂದಿ ಮೃತಪಟ್ಟಿದ್ದಾರೆ.
ಒಬ್ಬರು ಬಲಿ: ಶುಕ್ರವಾರ ಜಿಲ್ಲೆಯಲ್ಲಿ ಒಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ನ್ಯುಮೋನಿಯಾ ಹಾಗೂ ರಕ್ತದೊತ್ತಡದಿಂದ ಬಳಲುತಿದ್ದ ಉಡುಪಿ ತಾಲೂಕಿನ 82 ವರ್ಷ ಪ್ರಾಯದ ಮಹಿಳೆ ಕೋವಿಡ್‌ಗೆ ಪಾಸಿಟಿವ್ ಕಂಡುಬಂದು ಉಸಿರಾಟದ ತೊಂದರೆಯಿಂದ ಬಳಲಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬುಲೆಟಿನ್ ತಿಳಿಸಿದೆ.







