Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ವಿದ್ಯಾಗಮ ಯೋಜನೆ' ವೈಫಲ್ಯವೆಂಬಂತೆ...

'ವಿದ್ಯಾಗಮ ಯೋಜನೆ' ವೈಫಲ್ಯವೆಂಬಂತೆ ಬಿಂಬಿಸುತ್ತಿರುವುದು ವಿಷಾದನೀಯ: ಸಚಿವ ಸುರೇಶ್‍ ಕುಮಾರ್

ವಾರ್ತಾಭಾರತಿವಾರ್ತಾಭಾರತಿ9 Oct 2020 9:52 PM IST
share
ವಿದ್ಯಾಗಮ ಯೋಜನೆ ವೈಫಲ್ಯವೆಂಬಂತೆ ಬಿಂಬಿಸುತ್ತಿರುವುದು ವಿಷಾದನೀಯ: ಸಚಿವ ಸುರೇಶ್‍ ಕುಮಾರ್

ಬೆಂಗಳೂರು, ಅ.9: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ತಗಲಿದೆ ಎಂಬ ಕುರಿತಾದ ವರದಿಯೊಂದಿಗೆ ಶಾಲಾ ಮಕ್ಕಳಿಗೆ ಸುರಕ್ಷಿತ ಕ್ರಮಗಳೊಂದಿಗೆ ಕಲಿಕೆಯನ್ನು ಮುಂದುವರಿಸುವ ‘ವಿದ್ಯಾಗಮ’ ಯೋಜನೆಯ ವೈಫಲ್ಯವೆಂಬಂತೆ ಬಿಂಬಿಸುತ್ತಿರುವುದು ವಿಷಾದನೀಯ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಶಾಲೆ ಮುಚ್ಚಿರುವ ಸಮಯದಲ್ಲಿಯೂ ಮಕ್ಕಳ ನಿರಂತರ ಕಲಿಕೆ, ಪ್ರತಿ ಮಗುವೂ ಕಲಿಕಾ ವ್ಯಾಪ್ತಿಯಲ್ಲಿ ಬರುವಂತೆ ಯೋಜನೆ ಶಿಕ್ಷಕರು-ಮಕ್ಕಳ ನಿರಂತರ ಸಂಪರ್ಕ, ಮಕ್ಕಳಲ್ಲಿ ಮಾರ್ಗದರ್ಶಿತ ಸ್ವಯಂ ಕಲಿಕೆ, ಶಿಕ್ಷಕರ ಮೂಲಕ ಮಕ್ಕಳ ಮನೋಸ್ಥೈರ್ಯದ ವೃದ್ಧಿ, ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ಖಾತ್ರಿ, ಶಿಕ್ಷಕರು, ಶಾಲಾ ಮೇಲುಸ್ತುವಾರಿ ಸಮಿತಿಯ ಸದಸ್ಯರು, ಆಡಳಿತ ಮಂಡಳಿಯವರು, ಸ್ವಯಂ ಸೇವಕರು, ಪೋಷಕರು ಹಾಗೂ ಸಮುದಾಯದ ಎಲ್ಲಾ ಭಾಗೀದಾರ ಸಕ್ರಿಯ ತೊಡಗಿಸುವಿಕೆಯಂತಹ ಸದುದ್ದೇಶಗಳೊಂದಿಗೆ ಆರಂಭವಾಗಿರುವ ವಿದ್ಯಾಗಮ ಕಾರ್ಯಕ್ರಮವನ್ನು ನಿರ್ವಹಿಸುವ ಎಲ್ಲ ಶಿಕ್ಷಕರು ಮಕ್ಕಳನ್ನು ಕಲಿಕಾ ಚಟುವಟಿಕೆಗಳಲ್ಲಿ ಯಾವ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಮಾಹಿತಿ, ತರಬೇತಿಯನ್ನು ಪಡೆದು ಅವರು ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಅವರು ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ವಿವಿಧ ತರಗತಿಗಳ ಒಟ್ಟು 49.34 ಲಕ್ಷಕ್ಕೂ ಹೆಚ್ಚು ಸರಕಾರಿ ಶಾಲಾ ಮಕ್ಕಳು ‘ವಿದ್ಯಾಗಮ’ದ ಪ್ರಯೋಜನವನ್ನು ಪಡೆಯುತ್ತಿದ್ದು, 2 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ಎಲ್ಲಿಯೂ ವಿದ್ಯಾರ್ಥಿಗಳಿಗೆ ವಿದ್ಯಾಗಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಕಾರಣಕ್ಕಾಗಿ ಕೊರೋನ ಸೋಂಕು ತಗುಲಿರುವುದು ವರದಿಯಾಗಿಲ್ಲ ಎಂದು ಸಚಿವರು ತಿಳಿಸಿದ್ದಾರೆ.      

ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಿಗೆ ಒಂದು ತಿಂಗಳ ಹಿಂದೆ ಕೊರೋನ ಸೋಂಕು ತಗಲಿದ್ದು, ಅವರು ಈಗ ಸೋಂಕಿನಿಂದ ಪೂರ್ಣ ಗುಣಮುಖರಾಗಿ ಆರೋಗ್ಯದಿಂದಿದ್ದಾರೆ. ಈ ಅವಧಿಯಲ್ಲಿ ಶಾಲೆಯ ಯಾವುದೇ ಶಿಕ್ಷಕರಿಗೆ ಯಾವುದೇ ರೀತಿಯ ಸೋಂಕು ತಗಲಿರುವುದಿಲ್ಲ. ಸೆ.22ರಂದು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ರ‍್ಯಾಂಡಮ್ ಆಗಿ ಸುಮಾರು 203 ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಿದಾಗ 4 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ವಿದ್ಯಾರ್ಥಿಗಳು ಶಾಲಾವರಣದಲ್ಲಿ ಈ ಸೋಂಕು ತಗುಲಿಸಿಕೊಂಡಿರುವುದು ಸಾಧ್ಯವಿಲ್ಲ ಎಂಬ ಅಂಶಗಳನ್ನು ಸ್ಥಳೀಯ ಜಿಲ್ಲಾ ಉಪನಿರ್ದೇಶಕರು ದೃಢಪಡಿಸಿದ್ದಾರೆ. ಹೀಗಾಗಿ, ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ನಿಗದಿತ ಕನಿಷ್ಠ ಸಂಖ್ಯೆಯ ವಿದ್ಯಾರ್ಥಿಗಳು ಸೂಚಿತ ಶಿಕ್ಷಕರ ಮಾಗದರ್ಶನದಡಿ ಎಲ್ಲ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಕಲಿಕೆಯಲ್ಲಿ ಮುಂದುವರಿದಿದ್ದು, ವಿದ್ಯಾಗಮದ ಕಾರಣ ಈ ಸೋಂಕು ತಗಲಿರುತ್ತದೆನ್ನುವುದು, ಶಿಕ್ಷಕರು ವಿದ್ಯಾಗಮದ ಕಾರಣವೇ ಸೋಂಕು ಹೊಂದಿರುವ ರೀತಿಯಲ್ಲಿ ಬಿಂಬಿಸುವುದು ನಾವು ವಿದ್ಯಾರ್ಥಿ ಸಮೂಹಕ್ಕೆ ಎಸಗುವ ಅನ್ಯಾಯವಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದ ಯಾವುದೇ ಶಾಲೆಯಲ್ಲಿಯೂ ವಿದ್ಯಾಗಮ ದುರುಪಯೋಗವಾಗುತ್ತಿಲ್ಲ. ಕಲಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರು ತರಬೇತಿ ಹೊಂದಿದ ವೃತ್ತಿಪರರಾಗಿದ್ದಾರೆ. ಹಾಗೆಯೇ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಸೂಕ್ತ ಅರ್ಹತೆ ಹೊಂದಿದವರಾಗಿದ್ದಾರೆ ಎಂದಿರುವ ಸಚಿವರು, ವಿದ್ಯಾಗಮದಂಥ ಮಹತ್ವದ ಕಾರ್ಯಕ್ರಮದ ಬಗ್ಗೆ ಅಪಪ್ರಚಾರ ಸಲ್ಲದೆಂದು ಸಚಿವರು ಮನವಿ ಮಾಡಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಪಚಾರ

ಈಗಾಗಲೇ ಹೆಚ್ಚುತ್ತಿರುವ ಸಾಮಾಜಿಕ ಪಿಡುಗುಗಳ ನಡುವೆ ವಿದ್ಯಾರ್ಥಿಗಳನ್ನು ಸುರಕ್ಷಿತವಾದ ವಾತಾವರಣದಲ್ಲಿ ಕಲಿಕೆಗೆ ತೊಡಗಿಸಿಕೊಳ್ಳದೇ ಹೋದಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಪಚಾರವಾದಂತಾಗುತ್ತದೆ.

-ಎಸ್.ಸುರೇಶ್ ಕುಮಾರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X