ಬೆಂಗಳೂರು: ನಗರದಲ್ಲಿ 5,009 ಕೊರೋನ ಪ್ರಕರಣಗಳು ದೃಢ, 57 ಮಂದಿ ಸಾವು

ಬೆಂಗಳೂರು, ಅ.9: ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ 5,009 ಹೊಸ ಕೊರೋನ ಪ್ರಕರಣಗಳು ವರದಿಯಾಗಿದ್ದು, 57 ಜನರು ಮೃತಪಟ್ಟಿದ್ದಾರೆ.
ನಗರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,72,371 ಕ್ಕೆ ಏರಿಕೆಯಾಗಿದೆ. ಶುಕ್ರವಾರ 3,045 ಜನರು ಸೇರಿದಂತೆ ಒಟ್ಟಾರೆ 2,06,976 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು 57 ಸೇರಿ ಒಟ್ಟು 3,290 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನೂ, 62,104 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ 335 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾ ಕೇಂದ್ರಗಳಲ್ಲಿ ಶುಕ್ರವಾರ ಒಟ್ಟು 303 ವ್ಯಕ್ತಿಗಳು ಸೇರಿದಂತೆ 7,728 ವ್ಯಕ್ತಿಗಳನ್ನು ತಪಾಸಣೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆಯು ನೀಡಿರುವ ಬುಲೆಟಿನ್‍ನಲ್ಲಿ ಮಾಹಿತಿ ನೀಡಲಾಗಿದೆ.
Next Story





