Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಲೆಗಳನ್ನು ತೆರೆಯುವ ಧಾವಂತ...

ಶಾಲೆಗಳನ್ನು ತೆರೆಯುವ ಧಾವಂತ ಸರ್ಕಾರಕ್ಕಾಗಲಿ, ಶಿಕ್ಷಣ ಇಲಾಖೆಗಾಗಲಿ ಇಲ್ಲ: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ9 Oct 2020 11:43 PM IST
share
ಶಾಲೆಗಳನ್ನು ತೆರೆಯುವ ಧಾವಂತ ಸರ್ಕಾರಕ್ಕಾಗಲಿ, ಶಿಕ್ಷಣ ಇಲಾಖೆಗಾಗಲಿ ಇಲ್ಲ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಅ.09: ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಖಂಡಿತಾ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 

ಮಾಧ್ಯಮಗಳಲ್ಲಿ ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿದ್ದು, ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಸಚಿವ ಸುರೇಶ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.

ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಖಂಡಿತ ಇಲ್ಲ.‌ ನಮಗೆ ನಮ್ಮ‌ ಮಕ್ಕಳ ಆರೋಗ್ಯ, ಸುರಕ್ಷತೆ ಅತ್ಯಂತ ಮುಖ್ಯ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಮಕ್ಕಳನ್ನು ಬಲಿಕೊಟ್ಟು ಯಾರೂ ಯಾವ ಕಾರ್ಯವನ್ನೂ ಪ್ರತಿಷ್ಟೆಗಾಗಿ ಮಾಡಬಾರದು, ಮಾಡುವುದಿಲ್ಲ. ಶಾಲೆಗಳ ಬಗ್ಗೆ ರಾಜ್ಯದ ಎಲ್ಲಾ ಶಾಸಕರುಗಳ ಅಭಿಪ್ರಾಯವನ್ನು ಸುಮಾರು 9 ದಿವಸಗಳ ಹಿಂದೆ ನಾನು ಕೇಳಿದ್ದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರಿಂದ ಹಿಡಿದು, ಅನೇಕ ಸಚಿವರು, ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಅದೇ ರೀತಿ ಆರೋಗ್ಯ ಸಚಿವರಾದ ಶ್ರೀರಾಮುಲು ರವರೂ ಸಹ ಈ ಕುರಿತು ಚರ್ಚೆ ನಡೆಸಿ ನನಗೆ ತಮ್ಮ ಅಭಿಪ್ರಾಯ ನೀಡುವುದಾಗಿ ತಿಳಿಸಿದ್ದಾರೆ. ಡಾ. ಸುಧಾಕರ್ ರವರೂ ನನಗೆ ಪತ್ರದ ಮೂಲಕ ಅಭಿಪ್ರಾಯ ತಿಳಿಸಿದ್ದಾರೆ.‌ ಆದರೆ ಅಭಿಪ್ರಾಯಗಳನ್ನು ಕೇಳಿದ ಮಾತ್ರಕ್ಕೆ ಸರ್ಕಾರ ಶಾಲೆಗಳನ್ನು ಆರಂಭ ಮಾಡುವ ನಿರ್ಧಾರವನ್ನು ಈಗಾಗಲೇ ಕೈಗೊಂಡೇ ಬಿಟ್ಟಿದೆ ಎಂಬರ್ಥದಲ್ಲಿ ವಿಪುಲವಾಗಿ ಚರ್ಚೆ ನಡೆಯುತ್ತಿರುವುದು ದುರದೃಷ್ಟಕರ. ಮತ್ತೆ ಮತ್ತೆ ಇದು ಮರುಕಳಿಸುತ್ತಲೇ ಇದೆ. ನಾನು ಸ್ಪಷ್ಟೀಕರಣ ಕೊಡುತ್ತಲೇ ಇದ್ದೇನೆ. ಈಗಾಗಲೇ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳು ಸಹ ಈ ಕುರಿತು ಸರ್ಕಾರದ ನಿಲುವನ್ನು ಬಹಳ ಸ್ಪಷ್ಟವಾಗಿ ತಿಳಿಸಿದ್ದಾರೆ. ನಾನು ಮತ್ತೊಮ್ಮೆ, ಮಗದೊಮ್ಮೆ ಸ್ಪಷ್ಟಗೊಳಿಸುತ್ತಿದ್ದೇನೆ.‌ ಶಾಲೆ ಪ್ರಾರಂಭ ಮಾಡುವ ಯಾವುದೇ ತರಾತುರಿ ನಮ್ಮ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.

ಎಲ್ಲ ಮಾಧ್ಯಮಗಳಲ್ಲಿ ನನ್ನದೊಂದು ಮನವಿ. ಶಿಕ್ಷಣ ಇಲಾಖೆಯ ಮುಂದಿನ ತೀರ್ಮಾನವನ್ನು ಮಕ್ಕಳ ಹಿತವನ್ನು ಆದ್ಯತೆಯಲ್ಲಿಟ್ಟುಕೊಂಡು ಎಲ್ಲರೊಡನೆ ಸಮಾಲೋಚನೆಯ ನಂತರ ಕೈಗೊಳ್ಳಲಾಗುತ್ತದೆಯೇ ಹೊರತು ಯಾವುದನ್ನೂ ಧಿಡೀರನೆ ಘೋಷಿಸುವುದಿಲ್ಲ. ಯಾವುದೇ ಪೋಷಕರ ಮನಸ್ಸಿನಲ್ಲಿ ಈ ಕುರಿತು ಕಿಂಚಿತ್ ಸಹ ಗೊಂದಲ ಬೇಡ ಎಂದು ಕಳಕಳಿಯಿಂದ ತಿಳಿಸುತ್ತಿದ್ದೇನೆ. ನಾನು ಈ ರಾಜ್ಯದ ಶಿಕ್ಷಣ ಸಚಿವ ಮಾತ್ರನಲ್ಲ. ಸುಮಾರು ಒಂದು ಕೋಟಿ ಮಕ್ಕಳ ಪೋಷಕ ಎಂಬುದರ ಅರಿವು ನನಗಿದೆ ಎಂದು ಸಚಿವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X