Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಷ ದೊರೆಗೆ ಪುಷ್ಪಾರ್ಚನೆ ಮೂಲಕ 'ಮಹಿಷ...

ಮಹಿಷ ದೊರೆಗೆ ಪುಷ್ಪಾರ್ಚನೆ ಮೂಲಕ 'ಮಹಿಷ ದಸರಾ' ಆಚರಣೆ: ಮಾಜಿ ಮೇಯರ್ ಪುರುಷೋತ್ತಮ್

ವಾರ್ತಾಭಾರತಿವಾರ್ತಾಭಾರತಿ11 Oct 2020 8:25 PM IST
share
ಮಹಿಷ ದೊರೆಗೆ ಪುಷ್ಪಾರ್ಚನೆ ಮೂಲಕ ಮಹಿಷ ದಸರಾ ಆಚರಣೆ: ಮಾಜಿ ಮೇಯರ್ ಪುರುಷೋತ್ತಮ್

ಮೈಸೂರು,ಅ.11: ಮರೆತು ಹೋದ ಮೈಸೂರಿನ ಪ್ರಾಚೀನ ಅಸ್ಮಿತೆಯನ್ನು ಸ್ಮರಿಸುವ ದಿನ ಮತ್ತು ಭಾರತದ ಮೂಲನಿವಾಸಿಗಳ ದೊರೆ ಮಹಿಷ ರಾಜನ ನೆನಪಿಗಾಗಿ ಅ.15 ರಂದು ಮಹಿಷ ದಸರಾ ಆಚರಣೆ ಮಾಡಲಾಗುವುದು ಎಂದು ಮಹಿಷ ದಸರಾ ಆಚರಣಾ ಸಮಿತಿ ಮತ್ತು ಅಹಿಂದ ಕುಲಗಳ ಮುಖ್ಯಸ್ಥ ಮಾಜಿ ಮೇಯರ್ ಪುರುಷೋತ್ತಮ್  ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಅಹಿಂದ ಕುಲಗಳಿಂದ ಮಹಿಷ ದಸರಾ-2020 ಆಚರಣಾ ಸಮಿತಿ ವತಿಯಿಂದ ರವಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಮೂಲ ಸಂಸ್ಕೃತಿ ಮತ್ತು ಮೂಲ ಆಚರಣೆಯನ್ನು ಎತ್ತಿಹಿಡಿಯುವ ಸಲುವಾಗಿ ಕಳೆದ 6 ವರ್ಷಗಳಿಂದಲೂ ಮಹಿಷ ದಸರಾ ಆಚರಣೆ ಮಾಡಿಕೊಂಡು ಬರುತ್ತಿದ್ದು, ಅದರಂತೆ ಈ ಬಾರಿಯೂ ಕೋವಿಡ್ ನಿಯಮಾವಳಿ ಪ್ರಕಾರವೇ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಅಂದು ಮಹಿಷ ಮಂಡಲದಲ್ಲಿರುವ ಮಹಿಷ ದೊರೆಯ ಪ್ರತಿಮೆಗೆ ಬೆ.11 ಗಂಟೆಗೆ ಮಾಲಾರ್ಪಣೆ ಮಾಡಲಾಗುವುದು. ಈ ಸಂದರ್ಭದಲ್ಲಿ ಸಮಾಜದ ಗಣ್ಯರು, ಬುದ್ಧ ಬಂತೇಜಿಗಳು, ಸ್ವಾಮೀಜಿಗಳು, ಪ್ರೊಫೆಸರ್ ಗಳು, ಸಾಹಿತಿಗಳು, ಪ್ರಗಿತಪರ ಚಿಂತಕರು ಹಾಗೂ ವಿವಿಧ ಅಹಿಂದ ಸಂಘಟೆಯ ಧುರೀಣರು ಭಾವಹಿಸಲಿದ್ದಾರೆ ಎಂದು ಹೇಳಿದರು.

ಕೋವಿಡ್ ಇರುವುದರಿಂದ ಸರ್ಕಾರದ ಆದೇಶ ಪಾಲಿಸುವುದು ನಮ್ಮ ಕರ್ತವ್ಯವಾಗಿದ್ದು, ಮಹಿಷನ ಅಭಿಮಾನಿಗಳು ಮಹಿಷ ಮಂಡಲಕ್ಕೆ ಬರದೆ ತಮ್ಮ ತಮ್ಮ ಊರುಗಳಲ್ಲೇ ಮಹಾನಾಯಕ ಅಂಬೇಡ್ಕರ್ ಅವರ ಫ್ಲೆಕ್ಸ್ ಪಕ್ಕದಲ್ಲಿ ಮಹಿಷನ ಪೋಟೋ ಇಟ್ಟು ಪುಷ್ಪಾರ್ಚನೆ ಮಾಡಿ ನಮ್ಮ ಇತಿಹಾಸವನ್ನು ಮರುಕಳಿಸಬೇಕು ಎಂದು ಮನವಿ ಮಾಡಿದರು.

ಕಳೆದ ವರ್ಷ ಮಹಿಷ ದಸರಾ ಆಚರಣೆಗೆ ಅಡ್ಡಿಪಡಿಸಿ ಗೊಂದಲವನ್ನು ಕೆಲವರು ಉಂಟು ಮಾಡಿದರು. ಹಾಗಾಗಿ ಈ ಬಾರಿ ಮುಂಚಿತವಾಗಿಯೇ ಜಿಲ್ಲಾಧಿಕಾರಿ ಮತ್ತು ನಗರ ಪೊಲೀಸ್ ಆಯುಕ್ತರ ಅನುಮತಿಗಾಗಿ ಲಿಖಿತ ಪತ್ರ ನೀಡಿದ್ದೇವೆ. ನಾಳೆ ಅಥವಾ ನಾಳಿದ್ದು, ಅನುಮತಿ ನೀಡಬಹುದು. ಅವರ ಮಾರ್ಗಸೂಚಿ ಮತ್ತು ಅವರ ನಿಯಮಾನುಸಾರವೇ ನಾವುಗಳು ನಡೆದುಕೊಂಡು ನಮ್ಮ ಮೂಲ ದೊರೆಗೆ ಗೌರವ ಸಲ್ಲಿಸುತ್ತೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಾಹಿತಿ ಪ್ರೊ.ಕೆ.ಎಸ್.ಭಗವಾನ್, ಲೇಖಕ ಸಿದ್ದಸ್ವಾಮಿ, ಸೋಮಯ್ಯ ಮಲೆಯೂರು, ಚಿಕ್ಕಂದಾನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಹಿಷ ದಸರಾ ಆಚರಣೆ ಮಾಡಿಯೇ ತೀರುತ್ತೇವೆ
ಭಾರತದ ಮೂಲನಿವಾಸಿಗಳ ಆಚರಣೆಗೆ ಯಾರೇ ಅಡ್ಡಿಪಡಿಸಿದರು ಅ.15 ರಂದು ಮಹಿಷ ದಸರಾ ಆಚರಣೆ ಮಾಡಿಯೇ ತೀರುತ್ತೇವೆ ಎಂದು ಪುರುಷೋತ್ತಮ್ ತಿಳಿಸಿದರು.

ಮಹಿಷ ದಸರಾ ಆಚರಣೆ ಮಾಡುತ್ತೇವೆ ಎಂದು ಈಗಾಗಲೇ ಲಖಿತ ದೂರಪದಲ್ಲಿ ಜಿಲ್ಲಾಧಿಕಾರಿ ಮತ್ತು ನಗರ ಪೊಲೀಸ್ ಆಯುಕ್ತರಿಗೆ ಪತ್ರನೀಡಲಾಗಿದೆ. ಅವರ ಅನುಮತಿಗಾಗಿ ಕಾಯುತ್ತಿದ್ದೇವೆ. ಅವರು ಅನುಮತಿ ಕೊಡಲಿ ಬಿಡಲಿ ನಾವೂ ನಮ್ಮ ದೊರೆಯ ದಸರಾವನ್ನು ಆಚರಣೆ ಮಾಡಿಯೇ ಮಾಡುತ್ತೇವೆ ಎಂದು ಹೇಳಿದರು.

ಅಧಿಕಾರ ಇದೆ ಎಂದು ನಮ್ಮ ಆಚರಣೆಗೆ ಕೆಲವರು ಅಡ್ಡಿಪಡಿಸುತ್ತಿದ್ದಾರೆ. ಭಾರತದಲ್ಲಿ ಅವರವರ ಸಂಸ್ಕೃತಿ ಆಚಾರ ವಿಚಾರ ವ್ಯಕ್ತಪಡಿಸುವ ಹಕ್ಕಿದೆ. ಅದನ್ನು ಮೊಟಕುಗೊಳಿಸುವ ಅಧಿಕಾರ ಯಾರಿಗೂ ಇಲ್ಲ, ನಮ್ಮ ಸಂಸ್ಕೃತಿ ಮತ್ತು ಆಚಾರವನ್ನು ಎತ್ತಿ ಹಿಡಿಯುವ ಸಲುವಾಗಿ ಮತ್ತು ಇಂದಿನ ಯುವ ಪೀಳಿಗೆಗೆ ನಮ್ಮ ಇತಿಹಾಸವನ್ನು ಪರಿಚಯಿಸುವ ಸಲುವಾಗಿ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದೇವೆ. ಇದಕ್ಕೆ ಅಡ್ಡಿಪಡಿಸಿದರೆ ನಾವು ಸುಮ್ಮನಾಗುವುದಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X