Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೆರೆ ಹಾನಿ, ಕೊರೋನ ಎಫೆಕ್ಟ್:...

ನೆರೆ ಹಾನಿ, ಕೊರೋನ ಎಫೆಕ್ಟ್: ರಾಜ್ಯದಲ್ಲಿ ವಸತಿ ಯೋಜನೆ ಅನುಷ್ಠಾನ ಕುಂಠಿತ

ಸೂರಿಲ್ಲದವರಿಗೆ ಆಸರೆಯಾಗಲು 10 ಲಕ್ಷ ಮನೆ ನಿರ್ಮಾಣ ಗುರಿ ಇರಿಸಿದ್ದ ಸರಕಾರ

ವಾರ್ತಾಭಾರತಿವಾರ್ತಾಭಾರತಿ11 Oct 2020 9:47 PM IST
share
ನೆರೆ ಹಾನಿ, ಕೊರೋನ ಎಫೆಕ್ಟ್: ರಾಜ್ಯದಲ್ಲಿ ವಸತಿ ಯೋಜನೆ ಅನುಷ್ಠಾನ ಕುಂಠಿತ

ಬೆಂಗಳೂರು, ಅ. 11: ರಾಜ್ಯದಲ್ಲಿ ಸೂರಿಲ್ಲದವರಿಗೆ ಆಸರೆಯಾಗಲು ಹತ್ತು ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಇರಿಸಿಕೊಂಡಿತ್ತು. ಆದರೆ, ಇದರ ಅನುಷ್ಠಾನ ಮಾತ್ರ ನಿರೀಕ್ಷಿತ ರೀತಿಯಲ್ಲಿ ಸಾಗುತ್ತಿಲ್ಲ.

ರಾಜ್ಯದಲ್ಲಿ ನೆರೆ ಹಾನಿ ವ್ಯಾಪಕವಾಗಿ ಸಂಭವಿಸಿದ ಕಾರಣ ವಸತಿ ಯೋಜನೆಗಳ ಅನುಷ್ಠಾನ ಕುಂಠಿತಗೊಂಡಿತು. ನಂತರದ ದಿನಗಳಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕಳೆದ ನಾಲ್ಕೈದು ತಿಂಗಳಗಳ ಕಾಲ ಸಂಪೂರ್ಣವಾಗಿ ನಿರ್ಮಾಣ ಕಾಮಗಾರಿಗಳೇ ಸ್ಥಗಿತವಾದ ಹಿನ್ನೆಲೆಯಲ್ಲಿ ವಸತಿ ಯೋಜನೆಗಳೂ ಸ್ತಬ್ಧಗೊಂಡಿದ್ದವು. ಇದೀಗ ಅನ್‍ಲಾಕ್ ಪ್ರಕ್ರಿಯೆ ಆರಂಭಗೊಂಡ ನಂತರ ಮತ್ತೆ ವಸತಿ ಯೋಜನೆಗಳ ಅನುಷ್ಠಾನ ಕಾರ್ಯವನ್ನು ಆರಂಭಿಸಲಾಗಿದೆ.

ರಾಜೀವ್ ಗಾಂಧಿ ವಸತಿ ನಿಗಮ ಯೋಜನೆ ನಿಯಮಿತ 2020-21ನೆ ಸಾಲಿನಲ್ಲಿ ರಾಜ್ಯ ಸರಕಾರ 1.65 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಿದ್ದು, 8,846 ಮನೆಗಳನ್ನು ನಿರ್ಮಿಸಲಾಗಿದೆ. 2019ರ ಆಗಸ್ಟ್ ನಿಂದ 2020ರ ಜೂನ್‍ವರೆಗೆ ಒಟ್ಟಾರೆ 86,258 ಮನೆಗಳನ್ನು ನಿರ್ಮಿಸಲಾಗಿದ್ದು, 4,298 ಮನೆಗಳ ಹಂಚಿಕೆ ಮಾಡಲಾಗಿದೆ.

ಆಗಸ್ಟ್ 2019ರಿಂದ ಜೂನ್ 2020ರವರೆಗೆ ಇಂದಿರಾ ಗ್ರಾಮೀಣ ವಸತಿ ನಿವೇಶನ ಯೋಜನೆ ಮತ್ತು ವಾಜಪೇಯಿ ನಗರ ನಿವೇಶನ ಯೋಜನೆಗಳ ಅಡಿ ರಾಜ್ಯಾದ್ಯಂತ 54.57 ಎಕರೆ ಖಾಸಗಿ ಭೂಮಿ ಖರೀದಿಸಲಾಗಿದ್ದು, ಗ್ರಾಮೀಣ ನಿವೇಶನ ಯೋಜನೆಯಡಿಯಲ್ಲಿ 2,185 ಎಕರೆ ಸರಕಾರಿ ಜಮೀನನ್ನು ನಿವೇಶನ ಹಂಚಿಕೆಗಾಗಿ ಕಾಯ್ದಿರಿಸಲಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿಯಲ್ಲಿ ಕೇಂದ್ರದಿಂದ 60,658 ಮನೆಗಳ ಅನುಮೋದನೆ ಪಡೆದಿದ್ದು, 47,577 ಫಲಾನುಭವಿಗಳಿಗೆ ಸಿ.ಎಲ್.ಎಸ್.ಎಸ್ ಅಡಿ ಮನೆ ಸಾಲದ ಮೇಲೆ ಬಡ್ಡಿ ವಿನಾಯಿತಿ ನೀಡಿದೆ. 2018-19ರಲ್ಲಿ ಕೊಡಗು ಜಿಲ್ಲೆಯಲ್ಲಿ ಭೂ ಕುಸಿತದಿಂದ ಹಾನಿಗೊಳಗಾದವರಿಗೆ 840 ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದು, 520 ಮನೆ ನಿರ್ಮಾಣ ಪೂರ್ಣಗೊಂಡು 498 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗಿದೆ. ಬೆಂಗಳೂರಿನಲ್ಲಿ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಆರು ಪ್ಯಾಕೇಜ್‍ಗಳಲ್ಲಿ 28,754 ಬಹುಮಹಡಿ ಮನೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದು, ಈಗಾಗಲೇ 10,500 ಫಲಾನುಭವಿಗಳು ಮನೆಗಳ ಬೇಡಿಕೆಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಇಲಾಖೆ ತಿಳಿಸಿದೆ. 

ಕರ್ನಾಟಕ ಗೃಹ ಮಂಡಳಿಯ ಪ್ರಸ್ತುತ 9 ವಸತಿ ಯೋಜನೆಗಳು ಪ್ರಗತಿ, ಮುಕ್ತಾಯದ ಹಂತದಲ್ಲಿದ್ದು, 781 ಕೋಟಿ ರೂ. ವೆಚ್ಚದಲ್ಲಿ 454 ಮನೆಗಳ ನಿರ್ಮಾಣ ಮತ್ತು 9671 ನಿವೇಶನಗಳನ್ನ ಮಾಡಲಾಗುತ್ತಿದೆ. ವಿವಿಧ ಯೋಜನೆಗಳಿಂದ ವಿವಿಧ ವರ್ಗಗಳ 1,134 ವಸತಿ ನಿವೇಶನ, 380 ಫ್ಲ್ಯಾಟ್, 16 ಸಿಎ ನಿವೇಶನ, 6 ವಾಣಿಜ್ಯ ನಿವೇಶನ ಸೇರಿ ಒಟ್ಟು 1,536 ಸ್ವತ್ತುಗಳನ್ನು 201 ಕೋಟಿ ರೂ. ವೆಚ್ಚದಲ್ಲಿ ಹಂಚಿಕೆ ಮಾಡಲಾಗಿದೆ.

ಕೊಳಗೇರಿ ಅಭಿವೃದ್ಧಿ ಮಂಡಳಿಯ ರಾಜೀವ್ ಆವಾಸ್ ಯೋಜನೆಯಡಿ 1030.55 ಕೋಟಿ ರೂ. ಮೊತ್ತದಲ್ಲಿ 19,897 ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ನಂತರ 1,750 ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಯೋಜನೆಯಡಿ 10,975 ಕೋಟಿ ವೆಚ್ಚದಲ್ಲಿ 1,80,253 ಮನೆಗಳ ನಿರ್ಮಾಣ ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ. ಬಿಜೆಪಿ ಸರಕಾರ ಬಂದ ನಂತರ 693.32 ಕೋಟಿ ರೂ. ವೆಚ್ಚದಲ್ಲಿ 13,346 ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. 238 ಹೊಸ ಕೊಳಚೆ ಪ್ರದೇಶಗಳನ್ನು ಘೋಷಣೆ ಮಾಡಲಾಗಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 5.40 ಲಕ್ಷ ಮನೆಗಳ ನಿರ್ಮಾಣ ನಡೆಯುತ್ತಿದೆ. ನಗರ, ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ 1.70 ಲಕ್ಷ ಮನೆಗಳ ನಿರ್ಮಾಣ ನಡೆಯುತ್ತಿದೆ. ಈಗಾಗಲೇ ಬೆಂಗಳೂರಿನಲ್ಲಿ ಒಂದು ಲಕ್ಷ ಮನೆಗಳಲ್ಲಿ 30 ಸಾವಿರಕ್ಕೂ ಹೆಚ್ಚು ಮನೆ ನಿರ್ಮಾಣ ಪ್ರಾರಂಭವಾಗಿವೆ. ಇನ್ನೂ 25-30 ಸಾವಿರ ಮನೆಗಳ ನಿರ್ಮಾಣಕ್ಕೆ ಈ ತಿಂಗಳ ಅಂತ್ಯದಲ್ಲಿ ಚಾಲನೆ ನೀಡಲಾಗುತ್ತದೆ. ರಾಜ್ಯದ ಮೂಲೆ ಮೂಲೆಯಲ್ಲೂ ವಸತಿ ಯೋಜನೆಯಡಿ ನಿವಾಸಗಳ ನಿರ್ಮಾಣ ಮಾಡಲಿದ್ದೇವೆ'

-ವಿ.ಸೋಮಣ್ಣ, ವಸತಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X