ಕೆ.ಪಿ.ರಾವ್, ಕುಂಡಂತಾಯರಿಗೆ ಕಾಂತಾವರ ಕನ್ನಡ ಸಂಘದ ದತ್ತಿನಿಧಿ ಪ್ರಶಸ್ತಿ
ಮೂಡುಬಿದಿರೆ: ಕಾಂತಾವರ ಕನ್ನಡ ಸಂಘದ ಅಧ್ಯಕ್ಷ ನಿರಂಜನ ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2020ರ ಸಾಲಿನ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿಯನ್ನು ಭಾರತೀಯ ಭಾಷಾ ಗಣಕ ಪಿತಾಮಹ ನಾಡೋಜ ಕೆ.ಪಿ ರಾಯರಿಗೆ ಮತ್ತು ಪ್ರಸಿದ್ಧ ಭಾಷಾ ವಿಜ್ಞಾನಿ ಡಾ.ಯು.ಪಿ. ಉಪಾಧ್ಯಾಯರ ಹೆಸರಿನಲ್ಲಿರುವ ಮಹೋಪಾಧ್ಯಾಯ ಪ್ರಶಸ್ತಿಯನ್ನು ಹಿರಿಯ ಜಾನಪದ ವಿದ್ವಾಂಸ ಮತ್ತು ಚಿಂತಕ ಡಾ.ಕೆ.ಎಲ್.ಕುಂಡಂತಾಯ ಅವರಿಗೆ ನೀಡುವುದೆಂದು ನಿರ್ಧರಿಸಲಾಗಿದೆ.
ಪ್ರಶಸ್ತಿಯು ತಲಾ ಹತ್ತು ಸಾವಿರ ರೂ. ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದು ಡಿಸೆಂಬರ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





