ಹತ್ರಸ್ ಪ್ರಕರಣ: ಹೈಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ ಸಂತ್ರಸ್ತೆಯ ಕುಟುಂಬ
ನವೆಂಬರ್ 2ಕ್ಕೆ ವಿಚಾರಣೆ ಮುಂದೂಡಿಕೆ

ಹೊಸದಿಲ್ಲಿ: ಉತ್ತರಪ್ರದೇಶದ ಹತ್ರಸ್ ನಲ್ಲಿ ಕಳೆದ ತಿಂಗಳು ಸಾಮೂಹಿಕ ಅತ್ಯಾಚಾರಕ್ಕೀಡಾಗಿ ದಿಲ್ಲಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ 19ರ ಹರೆಯದ ದಲಿತ ಯುವತಿಯ ಕುಟುಂಬ ಸದಸ್ಯರುಗಳು ಅಲಹಾಬಾದ್ ಹೈಕೋರ್ಟ್ ನ ಲಕ್ನೋ ಪೀಠದ ಮುಂದೆ ಸೋಮವಾರ ಹಾಜರಾಗಿ ಹೇಳಿಕೆಗಳನ್ನು ದಾಖಲಿಸಿದರು.
ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿದೆ.
ಸಂತ್ರಸ್ತೆಯ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಅತ್ತಿಗೆಯಂದಿರು ರವಿವಾರ ರಾತ್ರಿ ಲಕ್ನೋಕ್ಕೆ ತೆರಳಬೇಕಾಗಿತ್ತು. ಆದರೆ ಭದ್ರತೆಯ ಭೀತಿಯ ಕಾರಣಕ್ಕೆ ತೆರಳಲು ನಿರಾಕರಿಸಿದರು. ಹೀಗಾಗಿ ಅವರು ಸೋಮವಾರ ಲಕ್ನೋಕ್ಕೆ ಪ್ರಯಾಣ ಬೆಳಸಿದರು. ನೇರವಾಗಿ ಅಲಹಾಬಾದ್ ನ್ಯಾಯಾಲಯಕ್ಕೆ ಹಾಜರಾದರು. ಹತ್ರಸ್ ಪ್ರಕರಣಕ್ಕೆಸಂಬಂಧಿಸಿ ನ್ಯಾಯಾಲಯವು ಸಂತ್ರಸ್ತೆಯ ಕುಟುಂಬ ಸದಸ್ಯರುಗಳ ಹೇಳಿಕೆಯನ್ನು ದಾಖಲಿಸಿಕೊಂಡಿತು.
Next Story





