Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರ. ನಾಗರಿಕ ಸೇವಾ ಪರೀಕ್ಷೆ...

ಉ.ಪ್ರ. ನಾಗರಿಕ ಸೇವಾ ಪರೀಕ್ಷೆ ನಡೆಯುತ್ತಿದ್ದ ಕಾಲೇಜಿನಲ್ಲಿ ಅಪ್ರಾಪ್ತೆಯ ಅತ್ಯಾಚಾರ: 8 ವಿದ್ಯಾರ್ಥಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ12 Oct 2020 5:41 PM IST
share
ಉ.ಪ್ರ. ನಾಗರಿಕ ಸೇವಾ ಪರೀಕ್ಷೆ ನಡೆಯುತ್ತಿದ್ದ ಕಾಲೇಜಿನಲ್ಲಿ ಅಪ್ರಾಪ್ತೆಯ ಅತ್ಯಾಚಾರ: 8 ವಿದ್ಯಾರ್ಥಿಗಳ ಬಂಧನ

ಲಕ್ನೋ : ರವಿವಾರ ಝಾನ್ಸಿ ಕಾಲೇಜೊಂದರಲ್ಲಿ ಉತ್ತರ ಪ್ರದೇಶ ಪ್ರೊವಿನ್ಶಿಯಲ್ ಸಿವಿಲ್ ಸರ್ವಿಸ್ ಪ್ರಿಲಿಮಿನರಿ ಪರೀಕ್ಷೆಗಳು ನಡೆಯುತ್ತಿದ್ದಂತೆಯೇ ಅತ್ತ ಕ್ಯಾಂಪಸ್ಸಿನಲ್ಲಿ 17 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ.

ಕಾಲೇಜಿನ ಸುಮಾರು ಒಂದು ಡಜನ್ ವಿದ್ಯಾರ್ಥಿಗಳು ತನ್ನನ್ನು ಕ್ಯಾಂಪಸ್‍ನೊಳಗೆ ಬಲವಂತವಾಗಿ ಕರೆದುಕೊಂಡು  ಹೋಗಿ ಅಲ್ಲಿ ಅವರಲ್ಲೊಬ್ಬ ತನ್ನ ಮೇಲೆ ಅತ್ಯಾಚಾರವೆಸಗಿದ್ದು, ಇತರರು  ವೀಡಿಯೋ ಚಿತ್ರೀಕರಣ ನಡೆಸಿದ್ದಾರೆ ಹಾಗು ತನ್ನಲ್ಲಿದ್ದ ರೂ. 2,000 ಹಣ ಲಪಟಾಯಿಸಿದ್ದಾರೆಂದು ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ. ಅಷ್ಟೇ ಅಲ್ಲದೆ ತಾನು ಭೇಟಿಯಾಗಲೆಂದು ಬಂದ ಹುಡುಗನಿಗೆ ಅವರೆಲ್ಲರೂ ಥಳಿಸಿದ್ದಾರೆ ಎಂದೂ ಆರೋಪಿಸಿರುವ ಸಂತ್ರಸ್ತೆ ಘಟನೆ ಕುರಿತು ಯಾರಲ್ಲಾದರೂ ಬಾಯ್ಬಿಟ್ಟರೆ ವೀಡಿಯೋ ವೈರಲ್ ಮಾಡುವುದಾಗಿಯೂ ಬೆದರಿಸಿದ್ದಾರೆ ಎಂದು ದೂರಿದ್ದಾಳೆ.

ಘಟನೆ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳಾದ ರೋಹಿತ್ ಸೈನಿ ಹಾಗೂ ಭರತ್ ಕುಶ್ವಾಹ ಸೇರಿದಂತೆ ಎಂಟು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಝಾನ್ಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ಸಂತ್ರಸ್ತೆ ಕ್ಯಾಂಪಸ್ಸಿನೊಳಗೆ ಹೇಗೆ ಬಂದಳೆಂಬ ಕುರಿತು ತನಿಖೆ ನಡೆಸಲಾಗುತ್ತಿದೆ. ಭದ್ರತಾ ಸಿಬ್ಬಂದಿ ಇಲ್ಲದ ಗೇಟಿನ ಮೂಲಕ ತನ್ನನ್ನು ಬಲವಂತವಾಗಿ ಕರೆದೊಯ್ಯಲಾಯಿತು ಎಂದು ಆಕೆ ಹೇಳಿದ್ದಾಳೆ. ಈ ಕಾಲೇಜಿನ ಕ್ಯಾಂಪಸ್ಸಿನಲ್ಲಿ ಒಬ್ಬ ಭದ್ರಾ ಸಿಬ್ಬಂದಿ ಮಾತ್ರವಿದ್ದು ಪರೀಕ್ಷೆ ಸಂಬಂಧಿತ ಭದ್ರತಾ ಕೆಲಸದಲ್ಲಿ ಆತ ನಿರತನಾಗಿದ್ದನೆನ್ನಲಾಗಿದೆ.

ಕೆಲ ಪೊಲೀಸ್ ಸಿಬ್ಬಂದಿಗೆ ಹುಡುಗಿ ಬೊಬ್ಬಿಡುತ್ತಿರುವ ದನಿ ಕೇಳಿ ಆಕೆಯನ್ನು ರಕ್ಷಿಸಿ ಆಕೆಯನ್ನು ಠಾಣೆಗೆ ಕರೆದುಕೊಂಡು ಹೋದ ಸಂದರ್ಭ ಆಕೆ ಘಟನೆಯ ಕುರಿತು ವಿವರಿಸಿದ್ದಳು. ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.

ಘಟನೆಯ ಕುರಿತು ಆದಷ್ಟು ಬೇಗ ಚಾರ್ಜ್ ಶೀಟ್ ಸಲ್ಲಿಸಿ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸೂಚನೆ ನೀಡಿದ್ದಾರೆ.

ಆರೋಪಿಗಳು ದ್ವಿತೀಯ ವರ್ಷದ ವಿದ್ಯಾರ್ಥಿಗಳು ಎಂದು ಕಾಲೇಜಿನ ಪ್ರಾಂಶುಪಾಲರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X