ಬಿಕಾಂ ಆರನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಅ.12: ಬೆಂಗಳೂರು ವಿಶ್ವವಿದ್ಯಾಲಯದ ಬಿಕಾಂ ಆರನೇ ಸೆಮಿಸ್ಟರ್ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪ್ರಶ್ನೆಪತ್ರಿಕೆ ಸೋರಿಕೆಯಾದ ವಿಷಯ ಖಚಿತಪಡುತ್ತಿದ್ದಂತೆ ಬೆಂಗಳೂರು ವಿವಿ ಆಡಳಿತ ಮಂಡಳಿ ಪರೀಕ್ಷೆಯನ್ನು ಮುಂದೂಡಿದ್ದು, ಪರೀಕ್ಷಾ ಕೊಠಡಿಗೆ ಆಗಮಿಸಿದ ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ.
ಬೆಂಗಳೂರು ವಿವಿ, ಮುಂದಿನ ಆದೇಶದವರೆಗೆ ಪರೀಕ್ಷೆ ಮುಂದೂಡಿದೆ. ಇದೇ ವೇಳೆ ಆಡಳಿತ ಮಂಡಳಿಯು ಆದಷ್ಟು ಬೇಗ ಪರೀಕ್ಷಾ ದಿನಾಂಕ ಪ್ರಕಟಿಸುವಂತೆಯೂ ಸೂಚನೆ ನೀಡಿದೆ.
Next Story





