Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳಿಗೆ...

ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತ ಕ್ರಮ ಖಂಡನಾರ್ಹ: ಪಿಎಫ್‍ಐ

ವಾರ್ತಾಭಾರತಿವಾರ್ತಾಭಾರತಿ12 Oct 2020 8:09 PM IST
share
ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತ ಕ್ರಮ ಖಂಡನಾರ್ಹ: ಪಿಎಫ್‍ಐ

ಬೆಂಗಳೂರು, ಅ.12: ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಯೋಜನೆಗಳಿಗೆ ನೀಡಲಾಗುವ ಅನುದಾನದ ಪೈಕಿ 2020-21ನೆ ಆರ್ಥಿಕ ವರ್ಷದಲ್ಲಿ ಸುಮಾರು 468 ಕೋಟಿ ರೂ.ಮೊತ್ತವನ್ನು ಕಡಿತಗೊಳಿಸಲು ತೀರ್ಮಾನಿಸಿರುವ ರಾಜ್ಯ ಬಿಜೆಪಿ ಸರಕಾರದ ಕ್ರಮವು ಖಂಡನಾರ್ಹ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‍ಐ) ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಷ ಟೀಕಿಸಿದ್ದಾರೆ.

ಇದು ಸಂಪತ್ತಿನ ಸಮಾನ ಹಂಚಿಕೆ ಮತ್ತು ಮುಸ್ಲಿಮ್ ಸಮುದಾಯದ ಸಬಲೀಕರಣವನ್ನು ತಡೆಯುವ ಫ್ಯಾಶಿಸ್ಟ್ ತಂತ್ರವಾಗಿದೆ. ಕಲ್ಯಾಣ ರಾಜ್ಯ ಎಂಬ ಪರಿಕಲ್ಪನೆಯ ಅಡಿಯಲ್ಲಿ ಆಡಳಿತ ನಡೆಸಬೇಕಾದದ್ದು ಸರಕಾರದ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಸ್ಲಿಮ್ ಸಮುದಾಯ ಭವನ(ಶಾದಿ ಮಹಲ್), ಅಲ್ಪಸಂಖ್ಯಾತರ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆ, ಶಾದಿ ಭಾಗ್ಯ ಯೋಜನೆ, ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗಳು, ಜೈನ್, ಬೌದ್ಧ ಮತ್ತು ಸಿಖ್ ಸಮುದಾಯಗಳಿಗೆ ನೀಡಲಾಗುತ್ತಿದ್ದ ಆರ್ಥಿಕ ನೆರವಿನ ಯೋಜನೆಗಳಿಗೆ ಅನುದಾನವನ್ನು ರದ್ದುಗೊಳಿಸಿರುವುದು ಸರಕಾರದ ಪಕ್ಷಪಾತಿ ಧೋರಣೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಸರಕಾರವು ವಿದ್ಯಾರ್ಥಿಗಳ ಸ್ಕಾಲರ್‍ಶಿಪ್ ಮೊತ್ತವನ್ನೂ ಹಂತಹಂತವಾಗಿ ಕಡಿತಗೊಳಿಸುತ್ತಾ ಬರುತ್ತಿದೆ. ಸರಕಾರದ ಈ ರೀತಿಯ ಧೋರಣೆಯು ಅವಕಾಶ ವಂಚಿತ, ಹಿಂದುಳಿದ ವರ್ಗಗಳ ಅಭಿವೃದ್ಧಿಯನ್ನು ತಡೆಹಿಡಿದಂತಾಗುತ್ತದೆ ನಾಸಿರ್ ಷಾಪ ತಿಳಿಸಿದ್ದಾರೆ.

ಈಗಾಗಲೆ ಅಲ್ಪಸಂಖ್ಯಾತ ಸಮುದಾಯದ ಅದರಲ್ಲೂ ವಿಶೇಷವಾಗಿ ಮುಸ್ಲಿಮ್ ಸಮುದಾಯದ ಸಬಲೀಕರಣಕ್ಕಾಗಿ ರಂಗನಾಥ್ ಮಿಶ್ರಾ, ಸಾಚಾರ್ ಆಯೋಗಗಳು ಹಲವು ಅಭಿವೃದ್ಧಿ ಯೋಜನೆಗಳ ಶಿಫಾರಸ್ಸುಗಳನ್ನು ಮಾಡಿದ್ದರೂ ಅದಕ್ಕೆ ವ್ಯತಿರಿಕ್ತವಾಗಿ ಯಡಿಯೂರಪ್ಪ ಸರಕಾರವು ದ್ವೇಷ ರಾಜಕಾರಣ ನಡೆಸುತ್ತಿದೆ ಎಂದು ಅವರು ದೂರಿದ್ದಾರೆ.

ಜನರು ಸರಕಾರದಿಂದ ತಮಗೆ ಅರ್ಹವಾಗಿ ಸಿಗಬೇಕಾದ ಹಕ್ಕು, ಸವಲತ್ತುಗಳನ್ನು ಪಡೆಯಲು ಹೋರಾಟ ನಡೆಸಬೇಕಾದ ಅಗತ್ಯತೆಯನ್ನು ಪ್ರಸಕ್ತ ಬಿಜೆಪಿ ಸರಕಾರದ ತೀರ್ಮಾನವು ಸ್ಪಷ್ಟಪಡಿಸಿದೆ ಎಂದು ನಾಸಿರ್ ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X