ವಿಧಾನಪರಿಷತ್ ನ ನಾಲ್ಕು ಸ್ಥಾನಗಳಿಗೆ ಚುನಾವಣೆ: ಕಣದಲ್ಲಿ 40 ಅಭ್ಯರ್ಥಿಗಳು

ಬೆಂಗಳೂರು, ಅ.12: ರಾಜ್ಯ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ನಾಮಪತ್ರಗಳ ಪರಿಶೀಲನೆ ಬಳಿಕ ಅಂತಿಮವಾಗಿ 40 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ 32 ನಾಮಪತ್ರಗಳು ಸಲ್ಲಿಕೆಯಾಗಿದ್ದವು, ನಾಮಪತ್ರಗಳ ಪರಿಶೀಲನೆ ಬಳಿಕ 11 ಮಂದಿ ಕಣದಲ್ಲಿದ್ದಾರೆ. ಆಗ್ನೇಯ ಪದವೀಧರರ ಕ್ಷೇತ್ರಕ್ಕೆ 29 ನಾಮಪತ್ರಗಳು ಸಲ್ಲಿಕೆಯಾಗಿದ್ದವು, ನಾಮಪತ್ರಗಳ ಪರಿಶೀಲನೆ ಬಳಿಕ 15 ಮಂದಿ ಇದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ 19 ಮಂದಿ ನಾಮಪತ್ರಗಳನ್ನು ಸಲ್ಲಿಸಿದ್ದರು, ಇದೀಗ 9 ಮಂದಿ ಕಣದಲ್ಲಿದ್ದಾರೆ. ಹಾಗೆಯೇ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ 16 ಮಂದಿ ನಾಮಪತ್ರ ಸಲ್ಲಿಸಿದ್ದು, ನಾಮಪತ್ರಗಳ ಪರಿಶೀಲನೆ ನಂತರ ಅಂತಿಮವಾಗಿ 5 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
Next Story





