ನೀಟ್ ಪರೀಕ್ಷೆ ಬರೆಯಲಾಗದವರಿಗೆ ಅ. 14ರಂದು ಪರೀಕ್ಷೆಗೆ ಅವಕಾಶ: ಸುಪ್ರೀಂ ಆದೇಶ
ಹೊಸದಿಲ್ಲಿ,ಅ.12: ಕೊರೋನ ವೈರಸ್ ಸೋಂಕಿನಿಂದಾಗಿ ಅಥವಾ ಕಂಟೈನ್ ಮೆಂಟ್ ವಲಯದಲ್ಲಿ ಉಳಿದುಕೊಳ್ಳಬೇಕಾದ ಕಾರಣದಿಂದಾಗಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಯನ್ನು ಬರೆಯಲಾಗದ ವಿದ್ಯಾರ್ಥಿಗಳಿಗೆ ಅಕ್ಟೋಬರ್ 14ರಂದು ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಸುಪ್ರೀಂಕೋರ್ಟ್ ಸೋಮವಾರ ಆದೇಶ ನೀಡಿದೆ.
ವೈದ್ಯಕೀಯ ಹಾಗೂ ದಂತವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗಾಗಿನ ನೀಟ್ ಪರೀಕ್ಷೆಯನ್ನು ಸೆಪ್ಟೆಂಬರ್ 13ರಂದು ನಡೆಸಲಾಗಿತ್ತು. ಮೇ ತಿಂಗಳ ಆರಂಭದಲ್ಲಿ ನಡೆಯಬೇಕಾಗಿದ್ದ ಪರೀಕ್ಷೆಯನ್ನು ಕೊರೋನ ವೈರಸ್ ಸಾಂಕ್ರಾಮಿಕದ ಹಾವಳಿಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.
ಸೆಪ್ಟೆಂಬರ್ 13ರಂದು ನಡೆದ ನೀಟ್ ಪರೀಕ್ಷೆಗೆ 16 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಬರೆದಿದ್ದು, ಶೇ.85ರಷ್ಟು ಹಾಜರಾತಿ ದಾಖಲಾಗಿತ್ತು.
Next Story