Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಕೆಎಂಎಫ್...

ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ12 Oct 2020 9:48 PM IST
share

ಬೆಳಗಾವಿ, ಅ.12: ಮುಂದಿನ ದಿನಗಳಲ್ಲಿ ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪುತ್ರ, ಕೆಎಂಎಫ್ ನಿರ್ದೇಶಕರೂ ಆಗಿರುವ ಅಮರನಾಥ ಜಾರಕಿಹೊಳಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಬಗ್ಗೆ ಸ್ವತಃ ಅಮರನಾಥ್ ಸ್ಪಷ್ಟನೆ ನೀಡಿದ್ದು, ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ನಾನು ವಯಸ್ಸಿನಲ್ಲಿ ತುಂಬಾ ಚಿಕ್ಕವನು. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿ ಸೇರಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಇನ್ನೂ ಸಾಕಷ್ಟು ಕೆಲಸ ಮಾಡುವ ಮನಸ್ಸಿದೆ. ನನ್ನ ತಂದೆ ರಮೇಶ ಜಾರಕಿಹೊಳಿ ರಾಜ್ಯ ಸರಕಾರದಲ್ಲಿ ಸಚಿವರಾಗಿದ್ದಾರೆ. ಗೋಕಾಕ ಕ್ಷೇತ್ರದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಸಮಸ್ಯೆಗಳನ್ನು ಪರಿಹರಿಸುವ ಗುರುತರ ಜವಾಬ್ದಾರಿ ನನ್ನ ಮೇಲಿದೆ. ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಸಾಕಷ್ಟು ಜನೋಪಯೋಗಿ ಕಾರ್ಯಗಳನ್ನು ಮಾಡಿದ್ದಾರೆ. ಅವುಗಳನ್ನು ಮುಂದುವರಿಸಿಕೊಂಡು ಹೋಗುವ ಸಲುವಾಗಿ ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬಹುಮತದಿಂದ ಆಯ್ಕೆ ಮಾಡುವ ಜವಾಬ್ದಾರಿ ನನ್ನಂತಹ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಟ್ರೋಲ್ ಆಗುತ್ತಿರುವ ವಿಷಯಗಳನ್ನು ಗಮನಿಸಿದ್ದೇನೆ. ನನ್ನ ಸ್ನೇಹಿತರು, ಆಪ್ತರು ಮತ್ತು ಕಾರ್ಯಕರ್ತರ ಮನದಾಳವನ್ನು ಅರಿತಿದ್ದೇನೆ. ರಾಜಕೀಯವಾಗಿ ಬೆಳೆಯಲು ನನಗೆ ಬೇಕಾದಷ್ಟು ಸಮಯವಿದೆ. ಸುರೇಶ ಅಂಗಡಿ ಅವರ ಕುಟುಂಬಕ್ಕೆ ಅನ್ಯಾಯವಾಗಲು ನಾವು ಬಿಡುವುದಿಲ್ಲ ಮತ್ತು ಯಾವುದೇ ಕಾರಣಕ್ಕೂ ಅಭ್ಯರ್ಥಿ ಆಗುವ ಮನಸ್ಸು ನನಗಿಲ್ಲ. ನಾನು ಎಲ್ಲಾ ಕಾರ್ಯಕರ್ತರಂತೆ ಟೊಂಕ ಕಟ್ಟಿ ನಿಂತು ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ದುಡಿಯುತ್ತೇನೆ ಎಂದಿದ್ದಾರೆ.

ಶ್ಯಾಮ್ ಪ್ರಸಾದ್ ಮುಖರ್ಜಿ, ದೀನ್‍ದಯಾಳ್ ಉಪಾಧ್ಯಾಯರಂತಹ ರಾಷ್ಟ್ರಭಕ್ತರು ಸ್ಥಾಪಿಸಿದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ನಾನು ಎಂದು ಹೇಳಿಕೊಳ್ಳಲು ಹೆಮ್ಮೆ ಅನಿಸುತ್ತದೆ.  ಕಾರ್ಯಕರ್ತರೆಲ್ಲಾ ಒಟ್ಟಾಗಿ ಕೆಲಸ ಮಾಡಿ ಪ್ರಧಾನಿ ಮೋದಿ ಅವರಿಗೆ ಇನ್ನಷ್ಟು ಶಕ್ತಿ ತುಂಬುತ್ತೇವೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X