ನೃತ್ಯ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಅ.12: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಸಂಗೀತ ನೃತ್ಯದಲ್ಲಿ ಪ್ರಕಟವಾಗಿರುವ ಕನ್ನಡದ ಉತ್ತಮ ಪುಸ್ತಕ ಬಹುಮಾನಕ್ಕೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ, ಗಮಕ ಪ್ರಕಾರಗಳಲ್ಲಿ 2019 ಜನವರಿಯಿಂದ ಡಿಸೆಂಬರ್‍ವರೆಗೆ ಪ್ರಕಟವಾಗಿರುವ ಪುಸ್ತಕಗಳನ್ನು ಕಳುಹಿಸಬಹುದಾಗಿದೆ.
ಬಹುಮಾನಕ್ಕೆ ಸಲ್ಲಿಸುವ ಪುಸ್ತಕಗಳು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು. ಸಂಪಾದಿತ ಕೃತಿಯಾಗಿರಬಾರದು, ಸ್ವರಚಿತ ಕೃತಿಯಾಗಿರಬೇಕು. ಪ್ರಥಮ ಮುದ್ರಾಣಾವೃತ್ತಿಯಾಗಿರಬೇಕು. ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ನ.15 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಸುಗಮ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2 ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002 ಇಲ್ಲಿಗೆ ಕಳುಹಿಸಬೇಕಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





