ಚಿಕ್ಕಮಗಳೂರು ಜಿಲ್ಲಾ ಸಂಯುಕ್ತ ಖಾಝಿಯಾಗಿ ಝೈನುಲ್ ಉಲಮಾ ಪದಗ್ರಹಣ

ಚಿಕ್ಕಮಗಳೂರು, ಅ.12: ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿಯಾಗಿ ನೇಮಕಗೊಂಡ ಹಿರಿಯ ವಿದ್ವಾಂಸ, ಸುನ್ನೀ ಉಲಮಾ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್ ಅಧಿಕಾರ ಸ್ವೀಕಾರ ಸಮಾರಂಭವು ಮಾಗಡಿ ಇಂಪಾಲ್ ಸಭಾಂಗಣದಲ್ಲಿ ನಡೆಯಿತು.
ನಿಕಟ ಪೂರ್ವ ಖಾಝಿ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ ಅನುಸ್ಮರಣೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮಕ್ಕೆ ಅಸ್ಸೈಯದ್ ಎಪಿಎಸ್ ತಂಙಳ್ ಉಪ್ಪಳ್ಳಿ ಪ್ರಾರ್ಥನೆಯೊಂದಿಗೆ ಚಾಲನೆ ನೀಡಿದರು. ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಯೂಸುಫ್ ಹಾಜಿ ಉಪ್ಪಳ್ಳಿ ಅಧ್ಯಕ್ಷತೆಯಲ್ಲಿ ಸುನ್ನೀ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ಪಿ.ಹಂಝ ಸಖಾಫಿ ಉದ್ಘಾಟಿಸಿದರು. ಸುನ್ನೀ ಉಲಮಾ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್ ಮುಖ್ಯ ಭಾಷಣ ಮಾಡಿದರು.
ಅಸ್ಸೈಯದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು ಖಾಝಿ ಬೈಅತ್ ಕಾರ್ಯಕ್ರಮಕ್ಕೆ ನೇತೃತ್ವ ನೀಡಿದರು. ಜಿಲ್ಲೆಯ 26 ಮೊಹಲ್ಲಾಗಳ ಆಡಳಿತ ಪ್ರತಿನಿಧಿಗಳು ನೂತನ ಖಾಝಿಯವರನ್ನು ಅನುಮೋದಿಸಿದರು. ಪದಗ್ರಹಣ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಝ್ ಕರಾವಳಿ ಖಾಝಿಯವರನ್ನು ಸನ್ಮಾನಿಸಿದರು.
ಸುನ್ನೀ ಉಲಮಾ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಯು.ಕೆ.ಮುಹಮ್ಮದ್ ಸಅದಿ ವಳವೂರು, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಉಪಾಧ್ಯಕ್ಷ ಅಬೂ ಸುಫಿಯಾನ್ ಇಬ್ರಾಹೀಂ ಮದನಿ, ಎಸ್‌ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಂಎಸ್‌ಎಂ ಝೈನಿ ಕಾಮಿಲ್, ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ಅಬೂಬಕರ್ ಸಿದ್ದೀಖ್ ಮೋಂಟುಗೋಳಿ, ಮುಫ್ತಿ ಅನ್ವರ್ ಹುಸೇನ್ ಸಾಹೇಬ್ ಮಾತನಾಡಿದರು.
ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಸದಸ್ಯ ಎನ್‌ಕೆಎಂ ಶಾಫಿ ಸಅದಿ, ಕರ್ನಾಟಕ ಮುಸ್ಲಿಂ ಜಮಾಅತ್ ಜಿಲ್ಲಾಧ್ಯಕ್ಷ ಶಾಹಿದ್ ರಝ್ವಿ, ಎಸ್‌ವೈಎಸ್ ಜಿಲ್ಲಾಧ್ಯಕ್ಷ ಕೆ.ಪಿ.ಅಬೂಬಕರ್, ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಅಬೂಬಕರ್ ನೇಜಾರ್, ತ್ವಾಹಾ ಸಅದಿ ಮೊದಲಾದವರು ಉಪಸ್ಥಿತರಿದ್ದರು.
ಇಸ್ಮಾಯೀಲ್ ಸಅದಿ ಮಾಚಾರ್ ಸ್ವಾಗತಿಸಿದರು. ಸಫ್ವಾನ್ ಸಖಾಫಿ ಶಾಂತಿಪುರ ವಂದಿಸಿದರು.












