ವಿಧಾನಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಿಜೆಪಿ ಶಾಸಕಿಯ ಪತಿ ಕಣಕ್ಕೆ

ಬೆಂಗಳೂರು, ಅ.13: ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಚಿದಾನಂದ್ ಗೌಡ ಸ್ಪರ್ಧೆಗಿಳಿದಿದ್ದು, ಅವರ ವಿರುದ್ಧ ಸ್ವತಃ ಬಿಜೆಪಿ ಶಾಸಕಿ ಪೂರ್ಣಿಮಾ ಅವರ ಪತಿ ಶ್ರೀನಿವಾಸ್ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
ಅ.12ರಂದು ನಾಮಪತ್ರ ವಾಪಸ್ಸು ಪಡೆಯುವುದಕ್ಕೆ ಕೊನೆಯ ದಿನವಾಗಿತ್ತು. ಆದರೆ, ಬಿಜೆಪಿಯ ಬಂಡಾಯ ಅಭ್ಯರ್ಥಿ ಶ್ರೀನಿವಾಸ್ ಉಮೇದುವಾರಿಕೆ ವಾಪಸ್ ಪಡೆದಿಲ್ಲ.
ಮೊದಲಿನಿಂದಲೂ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶ್ರೀನಿವಾಸ್ ಅವರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಇದೀಗ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
Next Story





