ಡಾ. ವಿಜಯಾ ಸುಬ್ಬರಾಜ್ ಗಣ್ಯ ಲೇಖಕಿ ಪ್ರಶಸ್ತಿಗೆ ರೇಖಾ ಕಾಖಂಡಕಿ ಆಯ್ಕೆ
ಬೆಂಗಳೂರು, ಅ.13: ಬಿಎಂಶ್ರೀ ಪ್ರತಿಷ್ಠಾನ ನೀಡುವ 'ಡಾ. ವಿಜಯಾ ಸುಬ್ಬರಾಜ್ ಗಣ್ಯ ಲೇಖಕಿ ಪ್ರಶಸ್ತಿ'ಗೆ ಕಾದಂಬರಿಗಾರ್ತಿ ರೇಖಾ ಕಾಖಂಡಕಿ ಅವರನ್ನು ಆಯ್ಕೆ ಮಾಡಲಾಗಿದೆ.
ಡಾ. ಸುರೇಶ್ ಪಾಟೀಲ ಮತ್ತು ಉಷಾ ಪಿ. ರೈ ಅವರ ಅಯ್ಕೆ ಸಮಿತಿಯು ಕಾದಂಬರಿ ಕ್ಷೇತ್ರದಲ್ಲಿನ ಅವರ ಕೊಡುಗೆಗಾಗಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ ಎಂದು ಬಿ.ಎಂ. ಶ್ರೀ ಪ್ರತಿಷ್ಠಾನ ಅಧ್ಯಕ್ಷ ಆರ್. ಲಕ್ಷ್ಮೀನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





