Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಪಿಸಿ: ಯಕ್ಷಗಾನ ಪ್ರಸಂಗ ಕೃತಿಗಳ...

ಪಿಪಿಸಿ: ಯಕ್ಷಗಾನ ಪ್ರಸಂಗ ಕೃತಿಗಳ ಅನಾವರಣ

ವಾರ್ತಾಭಾರತಿವಾರ್ತಾಭಾರತಿ13 Oct 2020 8:48 PM IST
share
ಪಿಪಿಸಿ: ಯಕ್ಷಗಾನ ಪ್ರಸಂಗ ಕೃತಿಗಳ ಅನಾವರಣ

ಉಡುಪಿ, ಅ.13: ಇಲ್ಲಿನ ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ಉಪನ್ಯಾಸಕ ಶಿವಕುಮಾರ ಅಳಗೋಡು ಬರೆದ ‘ದೇವಸೇನಾ ಪರಿಣಯ’ ಮತ್ತು ‘ದಂಡಕ ದಮನ’ ಯಕ್ಷಗಾನ ಪ್ರಸಂಗ ಕೃತಿಗಳನ್ನು ಉಡುಪಿ ಶ್ರೀಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಬಿಡುಗಡೆ ಗೊಳಿಸಿದರು.

ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ವಿಭಾಗ ಹಾಗೂ ಸಾಂಸ್ಕೃತಿಕ ಸಂಘಗಳು ಆಂತರಿಕ ಗುಣಮಟ್ಟ ಖಾತರಿ ಘಟಕದ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ವನ್ನು ಆಯೋಜಿಸಿದ್ದವು.

ಸಂಗೀತ, ಸಾಹಿತ್ಯಕ್ಕೆ ನಮ್ಮ ಸಂಸ್ಕೃತಿಯಲ್ಲಿ ಅಗ್ರಸ್ಥಾನ ನೀಡಲಾಗಿದೆ. ಇವುಗಳಲ್ಲಿ ಆಸಕ್ತಿ ಇಲ್ಲದವನು ಪಶುವಿಗೆ ಸಮಾನ ಎಂದೂ ಹೇಳಲಾಗಿದೆ. ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಂಡು, ಸುಸಂಸ್ಕೃತ ಬದುಕಿಗೆ ಅಗತ್ಯವಿರುವ ಸಾಹಿತ್ಯ, ಸಂಗೀತದತ್ತ ಎಲ್ಲರೂ ಒಲವನ್ನು ಬೆಳೆಸಿಕೊಳ್ಳಬೇಕೆಂದು ಶ್ರೀಗಳು ಅನುಗ್ರಹ ಸಂದೇಶ ನೀಡಿದರು.

ರಾಜ್ಯಮಟ್ಟದ ಯಕ್ಷಗಾನ ಪ್ರಸಂಗ ರಚನಾ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿ ಪುರಸ್ಕೃತ ದೇವಸೇನಾ ಪರಿಣಯ ಪ್ರಸಂಗದ ಕತೃ ಅಳಗೋಡು ಇವರನ್ನು ಶ್ರೀಗಳು ಇದೇ ಸಂದರ್ಭದಲ್ಲಿ ಸಮ್ಮಾನಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಗೌರವ ಕೋಶಾಧಿಕಾರಿ ಪ್ರದೀಪ್‌ಕುಮಾರ್ ಮಾತನಾಡಿ, ಕಾಲೇಜಿನ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಸರ ಶ್ರೀಮಂತವಾಗಿದ್ದು, ಅದನ್ನು ಮುಂದುವರಿಸಿಕೊಂಡು ಹೋಗುವಂತೆ ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ರಾಘವೇಂದ್ರ ಎ. ಅಧ್ಯಕ್ಷತೆ ವಹಿಸಿದ್ದರು. ತೆಂಕುತಿಟ್ಟು ಯಕ್ಷಗಾನದ ಖ್ಯಾತ ಭಾಗವತರಾದ ಕಾವ್ಯಶ್ರೀ ಅಜೇರು, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಕಾಂತ್ ಸಿದ್ದಾಪುರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕಿ ಡಾ. ಪ್ರಜ್ಞಾ ಮಾರ್ಪಳ್ಳಿ ಕಾರ್ಯಕ್ರಮ ನಿರೂಪಿಸಿದರು. ಸತೀಶ್ ಚಿತ್ರಾಪು ವಂದಿಸಿದರು. ಶಿವಕುಮಾರ ಅಳಗೋಡು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಸಭಾ ಕಾರ್ಯಕ್ರಮದ ಬಳಿಕ ಕಾವ್ಯಶ್ರೀ ಅಜೇರು ಅವರು, ಅನಾವರಣಗೊಂಡ ಪ್ರಸಂಗಗಳಿಂದ ಆಯ್ದ 33 ಛಂದಸ್ಸಿನ 33 ಪದ್ಯಗಳನ್ನು 33 ರಾಗಗಳಲ್ಲಿ ಹಾಡಿದರು. ಗಣೇಶ್ ಭಟ್ ಸಿದ್ದಕಟ್ಟೆ ಚಂಡೆವಾದಕರಾಗಿ, ಅವಿನಾಶ್ ವಿಟ್ಲ ಮದ್ದಳೆ ವಾದಕರಾಗಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X