Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಾರದೊಳಗೆ 27 ಪ್ರಾಥಮಿಕ ಆರೋಗ್ಯ...

ವಾರದೊಳಗೆ 27 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡಿಜಿಟಲ್ ಕ್ಲಿನಿಕ್‍ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ13 Oct 2020 9:43 PM IST
share
ವಾರದೊಳಗೆ 27 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡಿಜಿಟಲ್ ಕ್ಲಿನಿಕ್‍ಗೆ ಚಾಲನೆ

ಬೆಂಗಳೂರು, ಅ.13: ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ಮಹತ್ವಾಕಾಂಕ್ಷಿ ಯೋಜನೆ ಹಾಗೂ ಪರಿಕಲ್ಪನೆಯ ಕೂಸಾದ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡಿಜಿಟಲ್/ವರ್ಚ್ಯುಯಲ್ ಕ್ಲಿನಿಕ್‍ಗಳ ಸ್ಥಾಪನೆಯು ಅಂತಿಮ ರೂಪ ಪಡೆದಿದೆ. 27 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಂತಹ ಕ್ಲಿನಿಕ್‍ಗಳ ಸ್ಥಾಪನೆಗೆ ಒಂದು ವಾರದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ.

ಉಪ ಮುಖ್ಯಮಂತ್ರಿಯವರು ಬಿಬಿಎಂಪಿಯ ಆರೋಗ್ಯ ಅಧಿಕಾರಿಗಳ ಜೊತೆ ಮಂಗಳವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಈ ಸೇವಾ ಸೌಲಭ್ಯದಿಂದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈಗ ಲಭ್ಯವಿರುವ ಆರೋಗ್ಯ ಸೇವೆಗಳ ಜೊತೆಗೆ ಹಲವಾರು ಅನಾರೋಗ್ಯಗಳಿಗೆ ಸಂಬಂಧಪಟ್ಟಂತೆ ತಜ್ಞ ವೈದ್ಯರ ಸೇವೆಯೂ ಲಭ್ಯವಾಗಲಿದೆ. ಅಶ್ವತ್ಥ ನಾರಾಯಣ ಅವರು ಈ ಮಹಾತ್ವಾಕಾಂಕ್ಷಿ ಯೋಜನೆಯನ್ನು ಕಾರ್ಯಗತಗೊಳಿಸುವ ಸಲುವಾಗಿ ಈ ಹಿಂದೆ ಹಲವು ಬಾರಿ ಸಭೆಗಳನ್ನು ನಡೆಸಿದ್ದರು.

ಮೊದಲ ಹಂತದಲ್ಲಿ ನಗರದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ತಲಾ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಕ್ಲಿನಿಕ್ ಸ್ಥಾಪಿಸಲಾಗುತ್ತದೆ. ನಂತರದ ಹಂತದಲ್ಲಿ ನಗರದ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಿಸುವ ಉದ್ದೇಶದಿಂದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇದನ್ನು ವಿಸ್ತರಿಸಲಾಗುತ್ತದೆ.

ಸಭೆಯಲ್ಲಿ ಪಾಲ್ಗೊಂಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಆರೋಗ್ಯಸೇವಾ ವ್ಯವಸ್ಥಾಪನೆಯಲ್ಲಿ ಡಿಜಿಟಲೀಕರಣವನ್ನು ಹೆಚ್ಚಿನ ಮಟ್ಟದಲ್ಲಿ ಬಳಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು. ಕೋವಿಡ್-19 ಸೋಂಕಿನ ಈ ಸಂದರ್ಭವು ಡಿಜಿಟಲ್ ತಾಂತ್ರಿಕತೆ ನೆರವಿನಿಂದ ಆರೋಗ್ಯಸೇವಾ ಗುಣಮಟ್ಟವನ್ನು ಉನ್ನತ ದರ್ಜೆಗೇರಿಸಲು ಸೂಕ್ತ ಸಮಯವಾಗಿದೆ ಎಂದೂ ಅವರು ಹೇಳಿದರು.

ಈ ಹೊಸ ಆರೋಗ್ಯ ಸೇವಾ ವಿಧಾನದಲ್ಲಿ ಯಾವುದೇ ಅನಾರೋಗ್ಯ ಪೀಡಿತ ವ್ಯಕ್ತಿಯು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಟ್ಟು ಅಲ್ಲಿನ ಡಿಜಿಟಲ್ ಕ್ಲಿನಿಕ್‍ನಲ್ಲಿ ಆಧಾರ್ ಕಾರ್ಡ್ ನೆರವಿನಿಂದ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು. ಈ ಪ್ರಕ್ರಿಯೆ ನಂತರ ಡಿಜಿಟಲ್/ವರ್ಚ್ಯುಯಲ್ ಕ್ಲಿನಿಕ್ ಮೂಲಕ ಅನಾರೋಗ್ಯ ಬಾಧಿತರನ್ನು ಇ-ಕಮಾಂಡ್ ಕೇಂದ್ರದಲ್ಲಿರುವ ತಜ್ಞವೈದ್ಯರೊಂದಿಗೆ ಸಂಪರ್ಕಗೊಳಿಸಲಾಗುತ್ತದೆ. ಹೃದಯ ತಜ್ಞರು, ಚರ್ಮ ತಜ್ಞರು, ಸಾಮಾನ್ಯ ವೈದ್ಯಕೀಯ, ಇಎನ್ ಟಿ, ಕಣ್ಣಿನ ತಜ್ಞರು, ಶಿಶು ವೈದ್ಯಕೀಯ, ತಜ್ಞ ಮನೋವೈದ್ಯರು, ಸಾಮಾನ್ಯ ಶಸ್ತ್ರಚಿಕಿತ್ಸೆ ಸೇರಿದಂತೆ ಹಲವು ಆರೋಗ್ಯ ವಿಭಾಗಗಳ ತಜ್ಞರ ಸೇವೆಯನ್ನು ಇದರ ಮೂಲಕ ಒದಗಿಸಲಾಗುತ್ತದೆ. ಈ ಸೌಲಭ್ಯವು ರೋಗ ನಿರ್ಣಯ, ಕಾಯಿಲೆ ಬಾಧಿತರ ತಪಾಸಣೆ ಮತ್ತು ವೈದ್ಯಕೀಯ ಸಲಹೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆಂದು ಹೇಳಲಾಗಿದೆ.

ಈ ಟೆಲಿಹೆಲ್ತ್ ವೇದಿಕೆಯು ಕಾಯಿಲೆ ಬಾಧಿತರ ಆಯಾಕ್ಷಣದ ದತ್ತಾಂಶಗಳನ್ನು ಕೂಡ ತಜ್ಞ ವೈದ್ಯರಿಗೆ ಲಭ್ಯವಾಗಿಸಲಿದೆ. ಇದರಿಂದ ಆರೋಗ್ಯಸೇವಾ ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಹಾಗೂ ದಕ್ಷಗೊಳಿಸಲು ಸಾಧ್ಯ. ಜೊತೆಗೆ ಕಾಯಿಲೆ ಪೀಡಿತರು ಆಸ್ಪತ್ರೆ ದಾಖಲಾಗುವ ಸಂಭವನೀಯತೆ, ಆಸ್ಪತ್ರೆಯಲ್ಲಿದ್ದುಕೊಂಡೇ ಚಿಕಿತ್ಸೆಗೆ ಒಳಗಾಗಬೇಕಾದ ಅನಿವಾರ್ಯತೆ, ಚಿಕಿತ್ಸಾ ವೆಚ್ಚ ಇತ್ಯಾದಿ ಗಮನಾರ್ಹವಾಗಿ ತಗ್ಗುತ್ತವೆ ಎಂದೂ ವಿಶ್ಲೇಷಿಸಲಾಗಿದೆ.

ವಿಡಿಯೊ ಮತ್ತು ಚಾಟ್ ಮುಖಾಂತರ ವೈದ್ಯರೊಂದಿಗೆ ಸಮಾಲೋಚನೆ, ದೂರದಿಂದಲೇ ರೋಗನಿರ್ಣಯ ಹಾಗೂ ಮೇಲ್ವಿಚಾರಣೆ, ಆ್ಯಪ್ ಬಳಸಿ ವೈದ್ಯರ ಭೇಟಿಗೆ ಸಮಯ ನಿಗದಿ ಸೇರಿದಂತೆ ಹಲವು ಪ್ರಯೋಜನಗಳು ಇದರಿಂದ ಸಾಧ್ಯವಾಗಲಿದೆ. ಮಲ್ಲೇಶ್ವರಂನಲ್ಲಿ ಶೀಘ್ರವೇ ಡಯಾಗ್ನಾಸ್ಟಿಕ್ ಕೇಂದ್ರ ಕಾರ್ಯಾರಂಭಗೊಳಿಸುವುದರ ಬಗ್ಗೆಯೇ ಸಭೆಯಲ್ಲಿ ಚರ್ಚೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X