ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ತಮಟೆ ಚಳವಳಿ

ಹಾಸನ, ಅ.13: ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ದಲಿತ ಛಲವಾದಿ ಮಾದಿಗ ಸಮುದಾಯಗಳಲ್ಲಿ ಅರಿವು ಮೂಡಿಸಲು ಬೃಹತ್ ತಮಟೆ ಚಳವಳಿ ನಡೆಸಲಾಯಿತು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟು, ಎನ್.ಆರ್. ವೃತ್ತ, ಬಿ.ಎಂ. ರಸ್ತೆ ಮೂಲಕ ತಮಟೆ ಬಾರಿಸಿಕೊಂಡು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಸಮಾವೇಶಗೊಂಡರು.
ಈ ಸಂದರ್ಭದಲ್ಲಿ ದಲಿತ ಛಲವಾದಿ ಮಾದಿಗ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಕೃಷ್ಣದಾಸ್, ದಲಿತ ಮುಂಖಂಡರಾದ ಅಂಬೂಗ ಮಲ್ಲೇಶ್, ನಾಗರಾಜ್ ಹೆತ್ತೂರ್, ಎಚ್.ಪಿ. ಶಂಕರ್, ಆರ್.ಪಿ.ಐ. ಸತೀಶ್, ರಾಜೇಶ್, ಚಿನ್ನಸ್ವಾಮಿ, ರಾಜಶೇಖರ್, ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
Next Story





