ನಾಗರಿಕ ಹಿತರಕ್ಷಣಾ ವೇದಿಕೆ ತಲಪಾಡಿಯಿಂದ ಹೊಲಿಗೆ ಯಂತ್ರ ವಿತರಣೆ

ಉಳ್ಳಾಲ : ನಾಗರಿಕ ಹಿತರಕ್ಷಣಾ ವೇದಿಕೆ ತಲಪಾಡಿ ಇದರ ಆಶ್ರಯದಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ, ದೇಶ ವಿದೇಶಗಳಲ್ಲಿ ದೇಹ ದಾರ್ಡ್ಯ ಸ್ಪರ್ಧೆಯಲ್ಲಿ ವಿಜೇತರಾದ ದೇಹ ದಾರ್ಡ್ಯ ಪಟುಗಳಿಗೆ ಸನ್ಮಾನ ಕಾರ್ಯಕ್ರಮ, ಎಸ್ಸೆಸ್ಸೆಲ್ಸಿ ಪರೀಕ್ಷೆ ಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ತಲಪಾಡಿ ಯಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ತಾ.ಪಂ.ಅಧ್ಯಕ್ಷ ಮುಹಮ್ಮದ್ ಮೋನು ಕೊರೋನ ಸೋಂಕು ಹರಡಿದ ಬಳಿಕ ಬಹಳಷ್ಟು ಜನರಿಗೆ ಉದ್ಯೋಗ ಇಲ್ಲದಂತಾಗಿದೆ.ಇಂತಹ ಸಂದರ್ಭದಲ್ಲಿ ಹೊಲಿಗೆ ಯಂತ್ರ ವನ್ನು ವಿತರಣೆ ಮಾಡಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು. ಇಬ್ಬರು ದೇಹ ದಾರ್ಡ್ಯ ಪಟುಗಳನ್ನು ಸನ್ಮಾನಿಸಲಾಯಿತು. ಎಸೆಸೆಲ್ಸಿಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಕಾರ್ಯಕ್ರಮ ದಲ್ಲಿ ತಾ.ಪಂ.ಸದಸ್ಯ ಸಿದ್ದೀಕ್ ತಲಪಾಡಿ, ಸುರೇಖಾ ಚಂದ್ರ ಹಾಸ್, ಖಾದರ್ ತಲಪಾಡಿ ಶರ್ಮಿಳಾ ಟೀಚರ್, ಸತ್ತಾರ್, ಅಶ್ರಫ್ ಕೆಸಿರೋಡ್, ಗಣೇಶ ಶೆಟ್ಟಿ, ಕೃಷ್ಣಪ್ಪ ಸಾಲ್ಯಾನ್, ಅರುಣ್ ರಾಜ್, ಇಬ್ರಾಹಿಂ, ಮೊಯ್ದಿನ್ ಬಾವ, ಮೌಸೀರ್ ಅಹ್ಮದ್ ಸಾಮಣಿಗೆ ಮೊದಲಾ ದವರು ಉಪಸ್ಥಿತರಿದ್ದರು.
ಬಿಎಸ್ ಇಸ್ಮಾಯಿಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.







