Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತರ ಕರ್ನಾಟಕದಲ್ಲಿ ವರುಣನ ಆರ್ಭಟ:...

ಉತ್ತರ ಕರ್ನಾಟಕದಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ, ಹಲವು ಗ್ರಾಮಗಳ ಸಂಪರ್ಕ ಕಡಿತ

ನೆಲ ಕಚ್ಚಿದ ರೈತರ ಬೆಳೆ: ಕೋಟ್ಯಂತರ ರೂ. ನಷ್ಟ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ14 Oct 2020 7:53 PM IST
share
ಉತ್ತರ ಕರ್ನಾಟಕದಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ, ಹಲವು ಗ್ರಾಮಗಳ ಸಂಪರ್ಕ ಕಡಿತ

ಬೆಂಗಳೂರು, ಅ.14: ಉತ್ತರ ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿದೆ. ಅಲ್ಲದೆ, ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿನ ಜನರು ಮನೆಯಿಂದ ಹೊರಬರಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿಯ ಜೊತೆ ಕರಾವಳಿ ಜಿಲ್ಲೆಗಳಲ್ಲೂ ಕುಂಭದ್ರೋಣ ಮಳೆ ಸುರಿದಿದೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಸತತ ಮಳೆಯಿಂದ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

ಕಳೆದ ವರ್ಷ ಸುರಿದ ಭಾರೀ ಮಳೆಯಿಂದಾಗಿ ಕೋಟ್ಯಂತರ ರೂ.ಗಳು ಬೆಲೆ ಬಾಳುವಷ್ಟು ಕೃಷಿ ಭೂಮಿ ಹಾಗೂ ಬೆಳೆ ನಷ್ಟವಾಗಿದೆ. ಆದರೆ, ಈ ವರ್ಷವೂ ಭಾರೀ ಪ್ರಮಾಣ ಮಳೆಯಾಗುತ್ತಿದ್ದು, ಅದರಿಂದ ಸಾವಿರಾರು ಎಕರೆ ಪ್ರದೇಶದಲ್ಲಿನ ಕಬ್ಬು, ಸೋಯಾಬೀನ್, ಹತ್ತಿ, ಮೆಕ್ಕೆಜೋಳ ನೆಲ ಕಚ್ಚಿದ್ದು, ಕೆಲವು ಜಿಲ್ಲೆಗಳಲ್ಲಿ ಅಡಕೆ ಬೆಳೆಗೂ ಹಾನಿಯಾಗಿದೆ. ನೂರಾರು ಜನ ಮನೆ ಮಠ ಕಳೆದುಕೊಂಡು, ಅಕ್ಷರಶಃ ಬೀದಿಗೆ ಬಂದಿದ್ದಾರೆ. ಮಳೆ ಸಂತ್ರಸ್ತರ ನೆರವಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೂಡಲೇ ಧಾವಿಸಬೇಕಾಗಿದೆ ಎಂದು ಸಂತ್ರಸ್ತರು ಆಗ್ರಹಿಸಿದ್ದಾರೆ.

ವಿಜಯಪುರ, ಬಾಗಿಲುಕೋಟೆ, ಕಲುಬುರ್ಗಿ, ಬೀದರ್, ಯಾದಗಿರಿ, ರಾಯಚೂರಿನ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಜನತೆ ಎಚ್ಚರದಿಂದ ಇರಬೇಕೆಂದು ಸೂಚಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ, ಸದವತ್ತಿ, ಬೈಲಹೊಂಗಲ, ಚಿಕ್ಕೋಡಿ, ಅಥಣಿಯಲ್ಲಿ ಭಾರೀ ಮಳೆಯಾಗಿದ್ದು, ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, ಸೋಯಾಬೀನ್, ಹತ್ತಿ, ಮೆಕ್ಕೆಜೋಳ ಮಳೆಯಿಂದ ಹಾನಿಯಾಗಿದ್ದು, ರೈತರು ತಲೆಯ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಹ ದಾರುಣ ಪರಿಸ್ಥಿತಿ ಎದುರಾಗಿದೆ.

ವಿಜಯಪುರ ಜಿಲ್ಲೆಯಲ್ಲೂ ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಎಲ್ಲ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಧೋಣಿ ನದಿ ಪ್ರವಾಹ ಮುಂದುವರಿದಿದ್ದು, ಇದರ ಪರಿಣಾಮವಾಗಿ ಬಸವನ ಬಾಗೇವಾಡಿ, ದೇವರ ಹಿಪ್ಪರಗಿ ತಾಲೂಕುಗಳ ನಡುವೆ ಸಂಪೂರ್ಣ ಕಡಿದು ಹೋಗಿದೆ. ತಾಳಿಕೋಟೆ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ, ಹಡಗಿನಾಳ, ಶಿವಪುರ, ಕಲ್ಲದೇವನಹಳ್ಳಿ, ಮೂಕಿನಾಳ ಗ್ರಾಮಗಳ ಸಂಪರ್ಕಕ ಕಡಿದುಹೋಗಿದೆ.

ರಾಯಚೂರು ಜಿಲ್ಲೆಯಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು, ಸಾವಿರಾರು ಎಕರೆ ಪ್ರದೇಶದಲ್ಲಿನ ಭತ್ತ ನೆಲ ಕಚ್ಚಿದೆ. ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲೂ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಜನಜೀವನ ಬಾಧಿತಗೊಂಡಿದೆ.

ಮಹಾರಾಷ್ಟ್ರದಿಂದ ನೀರು ಬಿಡುಗಡೆ: ರಾಜ್ಯದಲ್ಲಿಯೇ ಮಳೆಯಿಂದಾಗಿ ಉತ್ತರ ಕರ್ನಾಟಕ ಪ್ರದೇಶದ ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 12 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಇನ್ನು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದಾಗಿ ಅನೇಕ ಕಡೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಬಂಟ್ವಾಳ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಕಾರಿಂಗೇಶ್ವರ ದೇವಸ್ಥಾನದ ತಡೆಗೋಡೆ ಕುಸಿದು ಬಿದ್ದಿದೆ. ಆದರೆ, ದೇವಾಲಯಕ್ಕೆ ಯಾವುದೇ ಹಾನಿಯಾಗಿಲ್ಲ.

ಸತತವಾಗಿ ಮಳೆ ಸುರಿಯುತ್ತಿರುವ ಸಲುವಾಗಿ ಕಲಬುರಗಿ ಜಿಲ್ಲೆಯ ಕಾಗೀಣಾ, ಮುಲ್ಲಾಮಾರಿ, ಭೀಮಾ ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ, ನಗರ ಮತ್ತು ಪಟ್ಟಣದ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ದವಸ ಧಾನ್ಯ ಸೇರಿದಂತೆ ಹಲವು ವಸ್ತುಗಳು ಹಾನಿಗೊಳಗಾಗಿವೆ. ಸೇತುವೆ, ರಸ್ತೆಗಳು ಜಲಾವೃತಗೊಂಡು ಸೇತುವೆಗಳು ಮಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ. ಸೇಡಂ ತಾಲೂಕಿನ ಕಾಗೀಣಾ ನದಿಗೆ ಅಡ್ಡಲಾಗಿರುವ ಮಳಖೇಡ ಸೇತುವೆ, ಕಾಚೂರು, ದಂಡೋತಿ ಸೇತುವೆ ಮುಳುಗಡೆ ಆಗಿವೆ. ಮಳಖೇಡದ ಉತ್ತರಾದಿ ಮಠ ಸಂಪೂರ್ಣ ಜಲಾವೃತವಾಗಿದೆ. ಭಕ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.

ಚಿಂಚೋಳಿ ಪಟ್ಟಣದ ಹರಿಜನವಾಡಾ, ಮೊಮಿನಪುರ ಸೇರಿದಂತೆ ಅನೇಕ ಬಡಾವಣೆಗಳು ಜಲಾವೃತಗೊಂಡಿದ್ದು, ಬೆನಕನಳ್ಳಿ ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗಿದೆ. ರಾತ್ರಿ ಇಡೀ ಜನರು ಎಚ್ಚರದಿಂದ ಇದ್ದು ಜೀವ ಉಳಿಸಿಕೊಂಡಿದ್ದಾರೆ. ಮುಲ್ಲಾಮಾರಿ ನದಿಗೆ ನೀರು ಉಕ್ಕಿ ಬಂದ ಪರಿಣಾಮ ಅನಾಹುತ ಉಂಟಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X