ದ.ಕ. ಜಿಲ್ಲೆ : ಕೋವಿಡ್‌ಗೆ ಐವರು ಬಲಿ, 292 ಮಂದಿಗೆ ಕೊರೋನ ಸೋಂಕು

ಮಂಗಳೂರು, ಅ.14: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮತ್ತೆ ಐವರು ಬಲಿಯಾಗಿದ್ದಾರೆ. ಈ ನಡುವೆ ಹೊಸದಾಗಿ 292 ಮಂದಿಗೆ ಸೋಂಕು ತಗುಲಿದ್ದು, 499 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಜಿಲ್ಲೆಯಲ್ಲಿ ಕೊರೋನದಿಂದ ಮೃತಪಟ್ಟವರ ಸಂಖ್ಯೆ 617ಕ್ಕೆ ಏರಿಕೆ ಕಂಡಿದೆ. ಜೊತೆಗೆ ಕೊರೋನ ಸೋಂಕು ಪ್ರಮಾಣದಲ್ಲೂ ಗಣನೀಯವಾಗಿ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 27,438ಕ್ಕೆ ಏರಿಕೆ ಕಂಡಿದೆ. ಜಿಲ್ಲೆಯಲ್ಲಿ ಒಂದೇ ದಿನ 499 ಮಂದಿ ಕೊರೋನದಿಂದ ಮುಕ್ತರಾಗಿದ್ದು, ಇಲ್ಲಿಯವರೆಗೆ 22,923 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 4110 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,09,218 ಸ್ಯಾಂಪಲ್ ಪರೀಕ್ಷಿಸಲಾಗಿದೆ. ಈ ಪೈಕಿ 1,81,780 ವರದಿ ನೆಗೆಟಿವ್ ಆಗಿದ್ದು, ಇನ್ನುಳಿದವು ಪಾಸಿಟಿವ್ ವರದಿಗಳು ಎಂದು ಜಿಲ್ಲಾ ಆರೋಗ್ಯ ಬುಲೆಟಿನ್‌ನಲ್ಲಿ ತಿಳಿಸಿದೆ.
7,335 ಮಾಸ್ಕ್ ಉಲ್ಲಂಘನೆ ಕೇಸು: ಜಿಲ್ಲೆಯಲ್ಲಿ ಇದುವರೆಗೆ ಮಾಸ್ಕ್ ಉಲ್ಲಂಘನೆಯ 7,332 ಪ್ರಕರಣಗಳು ಪತ್ತೆಯಾಗಿದ್ದು, 8,73,955 ರೂ. ದಂಡ ವಸೂಲಿ ಮಾಡಲಾಗಿದೆ.





