ಜೇನು ಕೃಷಿಯಿಂದ ಆದಾಯ ಗಳಿಕೆ ಸಾಧ್ಯ: ದಿನಕರ ಬಾಬು

ಉಡುಪಿ, ಅ.14: ಕೊರೋನಾದಿಂದಾಗಿ ಯುವ ಜನತೆ ಇಂದು ಕೃಷಿಯತ್ತ ಆಕರ್ಷಿಸುತ್ತಿದ್ದಾರೆ. ಕೃಷಿಯೊಂದಿಗೆ ಉಪಕಸುಬಾಗಿ ಜೇನು ಕೃಷಿಯನ್ನೂ ಮಾಡಿ ದರೆ ಉತ್ತಮ ಆದಾಯ ಗಳಿಸಲು ಸಾಧ್ಯವಾಗುತ್ತದೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರಬಾಬು ಹೇಳಿದ್ದಾರೆ.
ಉಡುಪಿ ತೋಟಗಾರಿಕೆ ಇಲಾಖೆ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಮಧುವನ ಹಾಗೂ ಜೇನು ಸಾಕಣೆ ಯೋಜನೆಯಡಿ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದಲ್ಲಿ ಆರಂಭಗೊಂಡ ಎರಡು ದಿನಗಳ ಜೇನುಕೃಷಿ ತರಬೇತಿ ಶಿಬಿರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಮುಖ್ಯ ಅತಿಥಿಗಳಾಗಿ ಜಿಪಂ ಉಪಾಧ್ಯಕ್ಷ ಶೀಲಾ ಕೆ.ಶೆಟ್ಟಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಹೆಗ್ಡೆ, ಸದಸ್ಯರಾದ ಶಿಲ್ಪಾಜಿ. ಸುವರ್ಣ, ರೇಶ್ಮಾ ಉದಯ ಶೆಟ್ಟಿ, ನಗರಸಭೆ ಸದಸ್ಯ ಪ್ರಭಾಕರ ಪೂಜಾರಿ, ತಾಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಶಿಲ್ಪಾ ಆರ್.ಕೋಟ್ಯಾನ್ ಭಾಗವಹಿಸಿದ್ದರು.
ಅಧ್ಯಕ್ಷತೆಯನ್ನು ಉಡುಪಿ ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್ ವಹಿಸಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಯಡಿ ಉಡುಪಿ ಜಿಲ್ಲೆಯ ವಿವಿಧ ತೋಟಗಾರಿಕೆ ಬೆಳೆಗಳ ಮಾಹಿತಿ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಹೇಮಂತ ಕುಮಾರ್ ಎಲ್. ಸ್ವಾಗತಿಸಿ, ನಿರೂಪಿಸಿದರು. ಸಹಾಯಕ ನಿರ್ದೇಶಕ ನಿಧೀಶ ಕೆ.ಜೆ. ವಂದಿಸಿದರು. ಸುಮಾರು 100 ಮಂದಿ ಶಿಬಿರಾರ್ಥಿಗಳು ಭಾಗವಹಿಸಿ ದ್ದರು.







