Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೀಟ್ ಪರೀಕ್ಷೆ: ಆತಂಕದಲ್ಲಿದ್ದ...

ನೀಟ್ ಪರೀಕ್ಷೆ: ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಸಹಾಯ ಹಸ್ತ ಚಾಚಿದ ಬಿಎಸ್‌ವೈ, ಡಾ.ಸುಧಾಕರ್

ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದ ಸಮಸ್ಯೆಗೆ ಸ್ಪಂದಿಸಿದ ಸಿಎಂ

ವಾರ್ತಾಭಾರತಿವಾರ್ತಾಭಾರತಿ14 Oct 2020 9:19 PM IST
share
ನೀಟ್ ಪರೀಕ್ಷೆ: ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಸಹಾಯ ಹಸ್ತ ಚಾಚಿದ ಬಿಎಸ್‌ವೈ, ಡಾ.ಸುಧಾಕರ್

ಬೆಂಗಳೂರು, ಅ.14: ಕೋವಿಡ್ ಕಾರಣದಿಂದಾಗಿ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದೆ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಹಾಯ ಹಸ್ತ ಚಾಚಿದ್ದಾರೆ. ಇವರಿಬ್ಬರ ಮಧ್ಯಪ್ರವೇಶದಿಂದಾಗಿ ವಿದ್ಯಾರ್ಥಿನಿ ನಿರಾತಂಕದಿಂದ ಬುಧವಾರ ಪರೀಕ್ಷೆ ಬರೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಲ್ಲೇನಹಳ್ಳಿಯ ವಿದ್ಯಾರ್ಥಿನಿ ತನುಜಾ ಕರೇಗೌಡ್ರ ಬೆಂಗಳೂರಿನ ಬಸವನಗುಡಿಯ ಕೇಂದ್ರದಲ್ಲಿ ನೀಟ್ ಪರೀಕ್ಷೆ ಬರೆದಿದ್ದಾರೆ. ಕೋವಿಡ್ ನಿಂದಾದ ಬದಲಾವಣೆಗಳು ತನುಜಾಗೆ ನೀಟ್ ಪರೀಕ್ಷೆ ಬರೆಯಲು ಅಡ್ಡಿ ಮಾಡಿದ್ದವು. ಈ ಸಮಸ್ಯೆಯನ್ನರಿತು ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಅಡ್ಡಿ, ಆತಂಕಗಳಿಲ್ಲದೆ ಆಕೆ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ.

ಆಗಿದ್ದೇನು?: ಶಿವಮೊಗ್ಗದ ನವೋದಯ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಪ್ರತಿಭಾವಂತ ವಿದ್ಯಾರ್ಥಿನಿ ತನುಜಾ ವೈದ್ಯೆಯಾಗಿ ಸಮಾಜದ ಸೇವೆ ಮಾಡುವ ಕನಸು ಹೊತ್ತಿದ್ದಾರೆ. ಈಕೆಯ ತಂದೆ ನಾಗರಾಜ ಕೃಷಿಕರಾಗಿದ್ದು, ಮಗಳಿಗೆ ಉತ್ತಮ ಶಿಕ್ಷಣ ನೀಡಿದ್ದಾರೆ. ಕಳೆದ ವರ್ಷ ತನುಜಾ ಪಿಯುಸಿ ಪೂರ್ಣಗೊಳಿಸಿದ್ದರು. ಈಕೆಯ ಪ್ರತಿಭೆಯನ್ನು ಮೆಚ್ಚಿದ್ದ ನವೋದಯ ಶಾಲೆಯ ಆಡಳಿತ ಮಂಡಳಿ ಪುಣೆಯಲ್ಲಿ ನಡೆಯುವ ಕೋಚಿಂಗ್‍ಗೂ ಈಕೆಯನ್ನು ಆಯ್ಕೆ ಮಾಡಿತ್ತು.

ಸೆ.13 ರಂದು ಎನ್‍ಟಿಎ (ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ) ನೀಟ್ ಪರೀಕ್ಷೆ ಏರ್ಪಡಿಸಿತ್ತು. ಈ ವೇಳೆ ತನುಜಾ ಅವರ ಮನೆಯ ಬಳಿ ಕಂಟೇನ್ಮೆಂಟ್ ವಲಯವನ್ನು ಘೋಷಿಸಲಾಗಿತ್ತು. ಜತೆಗೆ, ತನುಜಾಗೂ ಜ್ವರ ಬಂದಿದ್ದರಿಂದ ಪರೀಕ್ಷೆಗೆ ಕುಳಿತುಕೊಳ್ಳಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ತನುಜಾಳ ಆಸೆಯೇ ಕಮರಿಹೋಗುವ ಆತಂಕ ಉಂಟಾಗಿತ್ತು.

ಆದರೆ, ನಂತರ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ, ಎನ್‍ಟಿಎ ಮತ್ತೊಮ್ಮೆ ಪರೀಕ್ಷೆ ಏರ್ಪಡಿಸಿತು. ಆದರೆ ಈ ಬಾರಿ ಪರೀಕ್ಷೆ ಬರೆಯಲು ಕೋವಿಡ್ ಸಂಬಂಧಿತ ವರದಿ ಹಾಗೂ ಕೆಲ ದಾಖಲೆಗಳನ್ನು ಇ-ಮೇಲ್ ಮೂಲಕ ಕಳುಹಿಸಬೇಕು ಎಂದು ಎನ್‍ಟಿಎ ಸೂಚಿಸಿತ್ತು.

ಈ ಅವಕಾಶದಿಂದ ಮತ್ತೆ ಸಂತಸಗೊಂಡ ತನುಜಾ, ದಾಖಲೆಗಳನ್ನು ಇ-ಮೇಲ್ ಮಾಡಲು ಉತ್ಸುಕಳಾಗಿದ್ದಳು. ಆದರೆ ಹಳ್ಳಿಯಲ್ಲಿನ ನೆಟ್ ವರ್ಕ್ ಸಮಸ್ಯೆ ಹಾಗೂ ಕೋವಿಡ್ ವರದಿಗೆ ಸಂಬಂಧಿಸಿದ ಕೆಲ ತಾಂತ್ರಿಕ ಸಮಸ್ಯೆಗಳಿಂದಾಗಿ ಸರಿಯಾದ ಸಮಯದಲ್ಲಿ ಇ-ಮೇಲ್ ಕಳುಹಿಸಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಪರೀಕ್ಷೆ ಬರೆಯಲು ಇದ್ದ ಮತ್ತೊಂದು ಅವಕಾಶವೂ ನೆಲ ಕಚ್ಚಿತ್ತು.

ಈ ಸಮಸ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿ ತನುಜಾ ಹೇಳಿಕೊಂಡಿದ್ದನ್ನು ಗಮನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಡಾ.ಕೆ.ಸುಧಾಕರ್, ಮಧ್ಯಪ್ರವೇಶಿಸಿ ಸಹಾಯ ಮಾಡಿದ್ದಾರೆ. ಮುಖ್ಯಮಂತ್ರಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಚನೆ ನೀಡಿದ್ದಾರೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಎನ್‍ಟಿಎ ತಾಂತ್ರಿಕ ನಿರ್ದೇಶಕರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸುವ ಮೂಲಕ ವಿದ್ಯಾರ್ಥಿನಿ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ಮಗಳು ಇನ್ನು ನೀಟ್ ಪರೀಕ್ಷೆ ಬರೆಯಲು ಸಾಧ್ಯವೇ ಇಲ್ಲ ಎಂಬ ಆತಂಕ ಉಂಟಾಗಿತ್ತು. ಆದರೆ ಸರಿಯಾದ ಸಮಯದಲ್ಲಿ ಸಿಎಂ, ಸಚಿವರು ಮಧ್ಯಪ್ರವೇಶ ಮಾಡಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ದಾಖಲೆಗಳನ್ನು ಸಲ್ಲಿಸುವುದು ತಡವಾಗಿದ್ದರಿಂದ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಪರೀಕ್ಷೆ ನಡೆಸುವ ಏಜೆನ್ಸಿಯವರು ಹೇಳಿದ್ದರು. ಸಿಎಂ ಹಾಗೂ ಸಚಿವರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ತನುಜಾಳ ತಾಯಿ ಹಿರಿಯಮ್ಮ ಕೃತಜ್ಞತೆ ತಿಳಿಸಿದ್ದಾರೆ.

ಸರ್ಜನ್ ಆಗಿ ಜನರ ಸೇವೆ ಮಾಡಬೇಕೆಂಬ ಮಹತ್ವಾಕಾಂಕ್ಷೆ ಇದೆ. ಈಗ ನೀಟ್ ಪರೀಕ್ಷೆಯನ್ನು ಯಾವುದೇ ಆತಂಕ ಇಲ್ಲದೆ ಬರೆದಿದ್ದೇನೆ. ಪರೀಕ್ಷೆ ಬಹಳ ಚೆನ್ನಾಗಿತ್ತು ಎಂದೆನಿಸಿದೆ. ಮುಖ್ಯಮಂತ್ರಿ ಹಾಗೂ ಸಚಿವರಿಗೆ ಧನ್ಯವಾದ.

-ತನುಜಾ, ವಿದ್ಯಾರ್ಥಿನಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X