ಅ.15ರಂದು ಮಹಿಷ ದಸರಾ ಆಚರಣೆ: ಪುರುಷೋತ್ತಮ್

ಮೈಸೂರು, ಅ.14: ಈ ಬಾರಿಯ ಮಹಿಷ ದಸರಾ ಆಚರಣೆಯನ್ನು ನಗರದ ಅಶೋಕಪುರಂನಲ್ಲಿರುವ ಅಂಬೇಡ್ಕರ್ ಉದ್ಯಾನವನದಲ್ಲಿ ಆಚರಣೆ ಮಾಡಲಾಗುವುದು ಎಂದು ಮಹಿಷ ದಸರಾ ಆಚರಣಾ ಸಮಿತಿ ಮುಖಂಡ ಪುರುಷೋತ್ತಮ್ ತಿಳಿಸಿದ್ದಾರೆ.
ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ಮಹಿಷನಿಗೆ ಪುಷ್ಪಾರ್ಚನೆ ಕಾರ್ಯಕ್ರಮವನ್ನು ಕಳೆದ 6 ವರ್ಷಗಳಿಂದಲೂ ಆಚರಿಸಿಕೊಂಡು ಬರುತ್ತಿದ್ದು, ಅದರಂತೆ ಅ.15ರಂದು ಚಾಮುಂಡಿ ಬೆಟ್ಟದಲ್ಲಿರುವ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಗೌರವ ಸಲ್ಲಿಸುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಅನುಮತಿ ಕೋರಲಾಗಿತ್ತು, ಇದನ್ನು ಜಿಲ್ಲಾಡಳಿತ ನಿರಾಕರಿಸಿರುವ ಕಾರಣ ಅಶೋಕಪುರಂನ ಅಂಬೇಡ್ಕರ್ ಉದ್ಯಾನವನದಲ್ಲಿ ಅ.15ರಂದು ಬೆಳಗ್ಗೆ 9:30 ರಿಂದ 10 ಗಂಟೆಯೊಳಗೆ ಮಹಿಷ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





