Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು ಜಿಪಂ ಅಧ್ಯಕ್ಷರ ವಿರುದ್ಧದ...

ತುಮಕೂರು ಜಿಪಂ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ನಿಲುವಳಿ ಸಭೆ ರದ್ದು: ಹೈಕೋರ್ಟ್ ತೀರ್ಪಿನಿಂದ ಬಿಜೆಪಿಗೆ ಮುಖಭಂಗ

ವಾರ್ತಾಭಾರತಿವಾರ್ತಾಭಾರತಿ14 Oct 2020 11:49 PM IST
share
ತುಮಕೂರು ಜಿಪಂ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ನಿಲುವಳಿ ಸಭೆ ರದ್ದು: ಹೈಕೋರ್ಟ್ ತೀರ್ಪಿನಿಂದ ಬಿಜೆಪಿಗೆ ಮುಖಭಂಗ

ತುಮಕೂರು, ಅ.14: ಹಾಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿರುದ್ಧ್ದ ಪಕ್ಷಾತೀತವಾಗಿ ಜಿಪಂ ಸದಸ್ಯರು ತಂದಿದ್ದ ಅವಿಶ್ವಾಸ ನಿರ್ಣಯ ಗೊತ್ತುವಳಿಯೇ ನಕಲಿ ಎಂದು ಹೈಕೋರ್ಟು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 15 ರಂದು ನಡೆಯುಬೇಕಾಗಿದ್ದ ಅವಿಶ್ವಾಸ ಗೊತ್ತುವಳಿ ಸಭೆ ರದ್ದಾಗಿದೆ.

ತುಮಕೂರು ಜಿಲ್ಲಾ ಪಂಚಾಯತ್‌ನಲ್ಲಿ 57 ಸದಸ್ಯರಿದ್ದು, ಕಾಂಗ್ರೆಸ್‌ನ 23, ಜೆಡಿಎಸ್‌ನ 14, ಬಿಜೆಪಿಯ 19 ಹಾಗೂ ಓರ್ವ ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದು, ಅಧ್ಯಕ್ಷ ಸ್ಥಾನ ಬಿ.ಸಿ.ಎಂ(ಎ)ಗೆ ನಿಗದಿಯಾಗಿದ್ದು, ಬಿಜೆಪಿ-ಜೆಡಿಎಸ್ ಒಂದಾಗಿ ಲತಾ ರವಿಕುಮಾರ್ ಅವರನ್ನು ಅಧ್ಯಕ್ಷೆ, ಶಾರದ ನರಸಿಂಹಮೂರ್ತಿ ಅವರನ್ನು ಉಪಾಧ್ಯಕ್ಷೆಯನ್ನಾಗಿ ಆಯ್ಕೆ ಮಾಡಿದ್ದರು. ಆದರೆ ಇತ್ತೀಚಿನ ಬೆಳವಣಿಗೆಯಲ್ಲಿ ಅಧ್ಯಕ್ಷೆ ಪದಚ್ಯುತಿಗೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮೂವರು ಸೇರಿ 49 ಜನರು ಸಹಿ ಹಾಕಿ ವಿಭಾಗೀಯ ಕಾರ್ಯದರ್ಶಿಯವರಿಗೆ ಅವಿಶ್ವಾಸಗೊತ್ತುವಳಿ ಮಂಡನೆಗೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ಅ.15 ರಂದು ಅವಿಶ್ವಾಸಗೊತ್ತುವಳಿ ಸಭೆಯನ್ನು ನಿಗದಿಪಡಿಸಿದ್ದರು.

ಈ ನಡುವೆ ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್ ಅವರ ಪತಿ ಕಲ್ಕರೆ ರವಿಕುಮಾರ್ ಅವರು ತುಮಕೂರು ಜಿಪಂ ಅಧ್ಯಕ್ಷೆ ವಿರುದ್ಧ ಸಲ್ಲಿಸಿರುವ ಅವಿಶ್ವಾಸ ನಿಲುವಳಿಗೆ ಮಾಡಿರುವ ಸಹಿ ನಕಲಿಯಾಗಿದ್ದು, ಮಹಿಳಾ ಸದಸ್ಯರ ಪರವಾಗಿ ಅವರ ಪತಿಯವರೇ ಸಹಿ ಮಾಡಿದ್ದಾರೆ ಎನ್ನಲಾಗಿದೆ. ಆದ್ದರಿಂದ ಸದರಿ ಅವಿಶ್ವಾಸ ನಿಲುವಳಿ ಮನವಿ ಪತ್ರವನ್ನು ತಿರಸ್ಕರಿಸುವಂತೆ ಹೈಕೋರ್ಟಿನ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ದೂರುದಾರರು ತಿಳಿಸಿರುವಂತೆ ಜಿಪಂ ಮಹಿಳಾ ಸದಸ್ಯರ ಪರವಾಗಿ ಅವರ ಪತಿಯವರು ಸಹಿ ಮಾಡಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಅವಿಶ್ವಾಸ ನಿಲುವಳಿ ಸಭೆಯನ್ನು ರದ್ದುಗೊಳಿಸಿದೆ.

ಬಿಜೆಪಿಗೆ ತೀವ್ರ ಮುಖಭಂಗ

ಹಾಲಿ ಜಿಪಂ ಅಧ್ಯಕ್ಷರನ್ನು ಕೆಳಗೆ ಇಳಿಸಿ, ಆ ಜಾಗಕ್ಕೆ ಗೊಲ್ಲ ಸಮುದಾಯದ ಮಹಿಳೆಯನ್ನು ಕೂರಿಸಿ ಶಿರಾ ಉಪಚುನಾವಣೆಯಲ್ಲಿ ಗೊಲ್ಲಮತಗಳನ್ನು ಪಡೆಯಲು ಹವಣಿಸಿದ್ದ ಬಿಜೆಪಿಗೆ ಹೈಕೋರ್ಟಿನ ತೀರ್ಪು ತೀವ್ರ ಮುಖಭಂಗವನ್ನು ಉಂಟು ಮಾಡಿದೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಹೋಗಿ ಮುಖಭಂಗಕ್ಕೆ ಒಳಗಾಗಿರುವ ಬಿಜೆಪಿ ಜಿಲ್ಲಾಧ್ಯಕ್ಷ, ಶಿರಾ ಉಪ ಚುನಾವಣೆಯಲ್ಲಿ ಗೊಲ್ಲ ಸಮುದಾಯದ ಮತಗಳನ್ನು ಪಡೆಯಲು ಯಾವ ತಂತ್ರ ಹೂಡುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X