Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿ ಜಿಲ್ಲೆಯಲ್ಲಿ 1,058 ಮನೆಗಳಿಗೆ...

ಕಲಬುರಗಿ ಜಿಲ್ಲೆಯಲ್ಲಿ 1,058 ಮನೆಗಳಿಗೆ ಹಾನಿ, 48 ಕಾಳಜಿ ಕೇಂದ್ರಗಳ ಸ್ಥಾಪನೆ: ಡಿಸಿಎಂ ಕಾರಜೋಳ

ಧಾರಾಕಾರ ಮಳೆ, ಪ್ರವಾಹ

ವಾರ್ತಾಭಾರತಿವಾರ್ತಾಭಾರತಿ15 Oct 2020 6:29 PM IST
share
ಕಲಬುರಗಿ ಜಿಲ್ಲೆಯಲ್ಲಿ 1,058 ಮನೆಗಳಿಗೆ ಹಾನಿ, 48 ಕಾಳಜಿ ಕೇಂದ್ರಗಳ ಸ್ಥಾಪನೆ: ಡಿಸಿಎಂ ಕಾರಜೋಳ

ಬೆಂಗಳೂರು, ಅ. 15: ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ 1,058 ಮನೆಗಳು ಹಾನಿಯಾಗಿದ್ದು. 518 ಜಾನುವಾರುಗಳು ಮೃತಪಟ್ಟಿವೆ. 48 ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿ, 7,603 ಸಂತ್ರಸ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸಲಾಗಿದೆ. ಮಳೆ ಮುಂದುವರಿದಿರುವುದರಿಂದ ಇನ್ನು ಹಾನಿಗೊಳಗಾಗುವ ಮನೆ ಹಾನಿ, ಬೆಳೆ ಹಾನಿ, ರಸ್ತೆ, ಸೇತುವೆ, ಕಟ್ಟಡ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿ ಕುರಿತು ತ್ವರಿತವಾಗಿ ಸಮೀಕ್ಷೆ ನಡೆಸಿ, ಕೂಡಲೇ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದು, ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಸಮನ್ವಯತೆಯಿಂದ ಮುಂಜಾಗ್ರತಾ ಕ್ರಮಗಳು ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿರುವುದಾಗಿ ಅವರು ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣ, ಘಟಪ್ರಭ ಹಾಗೂ ಮಲಪ್ರಭ ನದಿಗಳ ಭೀಕರ ಪ್ರವಾಹದಿಂದ 31 ಗ್ರಾಮಗಳು ಬಾಧಿತಗೊಂಡಿವೆ. ಒಟ್ಟು 270 ಕುಟುಂಬಗಳು ಬಾಧಿತಗೊಂಡಿವೆ. 4 ಕಾಳಜಿ ಕೇಂದ್ರಗಳನ್ನು ತೆರೆದು 210 ಜನವರಿಗೆ ಊಟ, ಉಪಾಹಾರ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಬಾಧಿತವಾದ 270 ಕುಟುಂಬಗಳಿಗೆ ತಲಾ 10ಸಾವಿರ ರೂ. ತುರ್ತು ಪರಿಹಾರವನ್ನು ಪಾವತಿಸಲಾಗಿದೆ.

ಮುಧೋಳ್ ತಾಲೂಕಿನಲ್ಲಿ ಒಂದು ಜಾನುವಾರು ಮೃತಪಟ್ಟಿದ್ದು, 30 ಸಾವಿರ ರೂ. ಪರಿಹಾರ ಪಾವತಿಸಲಾಗಿದೆ. 34869 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. 105 ಮನೆಗಳು ಪೂರ್ಣ ಪ್ರಮಾಣದಲ್ಲಿ 26 ಮನೆಗಳು ತೀವ್ರ ಹಾಗೂ 338 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಮನೆ ಹಾನಿ ಕುರಿತು ಜಂಟಿ ಸಮೀಕ್ಷೆ ಮುಗಿದ 347 ಮನೆ ಹಾನಿ ಬಗ್ಗೆ ಆರ್‍ಜಿಹೆಚ್‍ಸಿಎಲ್ ತಂತ್ರಾಂಶದಲ್ಲಿ ದಾಖಲಿಸಲಾಗಿದೆ. 23 ಕೈಮಗ್ಗಗಳು ಹಾನಿಗೊಳಗಾಗಿವೆ. ಗ್ರಾಮೀಣಾಭಿವೃದ್ಧಿ ಇಲಾಖೆಯ 999 ಕಿ.ಮಿ ರಸ್ತೆ, 19 ಕುಡಿಯುವ ನೀರಿನ ಯೋಜನೆಗಳು ಹಾಗೂ 32 ಸೇತುವೆ ಮತ್ತು ಬಂದರುಗಳು ಹಾನಿಯಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ..

ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 94 ಕಿ.ಮೀ. ರಾಜ್ಯ ಹೆದ್ದಾರಿ, 308 ಕಿ.ಮೀ ಜಿಲ್ಲಾ ಮುಖ್ಯರಸ್ತೆಗಳು ಹಾಗೂ 54 ಸೇತುವೆಗಳು ಹಾನಿಯಾಗಿವೆ. 43 ಕೆನಾಲ್, 28 ಕೆರೆಗಳು, 15 ಏತನೀರಾವರಿ ಯೋಜನೆಗಳು ಹಾನಿಯಾಗಿವೆ. 1,851 ಕಂಬಗಳು, 471 ಟಿ.ಸಿ.ಗಳು 69 ಕಿ.ಮೀ. ವಿದ್ಯುತ್ ಲೈನ್‍ಗಳು ಹಾನಿಯಾಗಿರುತ್ತವೆ. ಒಟ್ಟು 857ಕೋಟಿ ರೂ.ನಷ್ಟವಾಗಿದೆ ಎಂದು ಪ್ರಾಥಮಿಕ ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತುರ್ತು ಪರಿಹಾರ ಕೈಗೊಳ್ಳಲು ಸೂಚನೆ: ಕಲಬುರಗಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು, ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದ್ದು, ಜನತೆಯು ಸಂಕಷ್ಟದಲ್ಲಿರುವುದನ್ನು ಗಮನಿಸಿ ತುರ್ತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಈ ಜಿಲ್ಲೆಗಳ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣದ ಮಾಹಿತಿಯನ್ನು ಪಡೆದು, ಮುಂಜಾಗ್ರತಾ ಕ್ರಮಕೈಗೊಂಡು, ಮನೆ ಹಾನಿಗೊಳಗಾದ ಸಂತ್ರತ್ತರಿಗಾಗಿ ಕಾಳಜಿ ಕೇಂದ್ರ ಸ್ಥಾಪಿಸಿ, ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾರಜೋಳ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X