Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಧರಣಿ ನಿರತ ಉಪನ್ಯಾಸಕರಿಗೆ ಕಾಲೇಜು...

ಧರಣಿ ನಿರತ ಉಪನ್ಯಾಸಕರಿಗೆ ಕಾಲೇಜು ಆರಂಭವಾದ ತಕ್ಷಣ ನೇಮಕಾತಿ ಆದೇಶ: ಡಿಸಿಎಂ

ವಾರ್ತಾಭಾರತಿವಾರ್ತಾಭಾರತಿ15 Oct 2020 8:13 PM IST
share
ಧರಣಿ ನಿರತ ಉಪನ್ಯಾಸಕರಿಗೆ ಕಾಲೇಜು ಆರಂಭವಾದ ತಕ್ಷಣ ನೇಮಕಾತಿ ಆದೇಶ: ಡಿಸಿಎಂ

ಬೆಂಗಳೂರು, ಅ.15: ಕೇಂದ್ರ ಸರಕಾರದ ಸೂಚನೆಯಂತೆ ಅತಿ ಶೀಘ್ರದಲ್ಲಿಯೆ ಕಾಲೇಜುಗಳು ಆರಂಭವಾಗುತ್ತಿದ್ದು, ಅದರಂತೆ ರಾಜ್ಯದಲ್ಲಿ ಕಾಲೇಜುಗಳು ಆರಂಭವಾದ ಕೂಡಲೇ ಕೌನ್ಸೆಲಿಂಗ್ ಮುಗಿಸಿಕೊಂಡು ನೇಮಕಾತಿ ಅದೇಶದ ನೀರಿಕ್ಷೆಯಲ್ಲಿರುವ ಎಲ್ಲ ಉಪನ್ಯಾಸಕರಿಗೆ ನೇಮಕಾತಿ ಪತ್ರವನ್ನು ನೀಡಲು ಸರಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ನೇಮಕಾತಿ ಪತ್ರ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನ ಪಿಯುಸಿ ಮಂಡಳಿ ಎದುರು ಧರಣಿ ನಡೆಸುತ್ತಿರುವ ಭಾವಿ ಉಪನ್ಯಾಸಕರನ್ನು ಗುರುವಾರ ಭೇಟಿಯಾದ ಅವರು, ಹಣಕಾಸು ಇಲಾಖೆಯ ಕೆಲ ಆಕ್ಷೇಪಗಳ ಕಾರಣಕ್ಕೆ ನೇಮಕಾತಿ ಪತ್ರಗಳನ್ನು ನೀಡುವುದು ತಡವಾಗಿದೆ. ಇದಕ್ಕೆ ಕೋವಿಡ್ ಒಂದು ಪ್ರಮುಖ ಕಾರಣ ಎಂದರು.

ಇದೀಗ ಸ್ವತಃ ಮುಖ್ಯಮಂತ್ರಿಗಳೆ ಹಣಕಾಸು ಇಲಾಖೆ ಎತ್ತಿದ್ದ ಆಕ್ಷೇಪಗಳನ್ನು ನಿವಾರಿಸಿ ಕಾಲೇಜುಗಳು ಆರಂಭವಾದ ಕೂಡಲೇ ನೇಮಕಾತಿ ಆದೇಶಗಳನ್ನು ನೀಡುವಂತೆ ಸೂಚಿಸಿದ್ದಾರೆಂದು ಅಶ್ವತ್ಥ ನಾರಾಯಣ ತಿಳಿಸಿದರು.

ದಿನೇದಿನೇ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಲೇಜುಗಳು ಶುರುವಾಗುವುದು ಇನ್ನೂ ತಡವಾಗಬಹುದು. ಹೀಗಾಗಿ ಈಗಲೇ ಆದೇಶ ಪತ್ರಗಳನ್ನು ನೀಡಿ ಎಂದು ಉಪನ್ಯಾಸಕರು ಒತ್ತಾಯ ಮಾಡಿದರು.

ಇದಕ್ಕೆ ಉತ್ತರಿಸಿದ ಉಪ ಮುಖ್ಯಮಂತ್ರಿ, ಕಾಲೇಜುಗಳನ್ನು ಆರಂಭ ಮಾಡಿ ಎಂದು ಈಗಾಗಲೇ ಕೇಂದ್ರ ಸರಕಾರ ಸ್ಪಷ್ಟ ಸೂಚನೆ ನೀಡಿದೆ. ಆ ನಿಟ್ಟಿನಲ್ಲಿ ರಾಜ್ಯ ಸರಕಾರ ಕೆಲಸ ಮಾಡುತ್ತಿದೆ ಹಾಗೂ ಕೆಲ ಮೂಲಭೂತ ಸೌಕರ್ಯಗಳ ತಯಾರಿ ಮಾಡಿಕೊಳ್ಳುತ್ತಿದೆ. ನಿಮಗೆ ಅನುಮಾನವೇ ಬೇಡ. ಕಾಲೇಜುಗಳು ಖಂಡಿತವಾಗಿಯೂ ಆರಂಭವಾಗುತ್ತವೆ. ಸರಕಾರದ ಮೇಲೆ ನಂಬಿಕೆ ಇಡಿ ಎಂದು ಮನವಿ ಮಾಡಿದರು.

ಸರಕಾರ ನಿಮ್ಮ ಪರವಾಗಿದೆ: ಎಲ್ಲರಿಗೂ ಗೊತ್ತಿರುವಂತೆ ಶೈಕ್ಷಣಿಕ ವರ್ಷ ನಿಲ್ಲಬಾರದು ಎಂಬ ಉದ್ದೇಶದಿಂದ ಸರಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಪಿಯುಸಿ, ಎಸೆಸೆಲ್ಸಿ, ಸಿಇಟಿ, ನೀಟ್ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ಯಾವುದೇ ಕಾರಣಕ್ಕೂ ಅಕಾಡೆಮಿಕ್ ವರ್ಷ ನಿಲ್ಲುವುದಿಲ್ಲ. ಶೈಕ್ಷಣಿಕ ಚಟುವಟಿಕೆಗಳು ನಿರಾತಂಕವಾಗಿ ನಡೆಯಲೇಬೇಕು. ಜತೆಗೆ ನಮ್ಮ ಸರಕಾರವು ಶಿಕ್ಷಕರು, ಉಪನ್ಯಾಸಕರ ಪರವಾಗಿದೆ. ನಿಮ್ಮ ಬೇಡಿಕೆಯನ್ನು ಸ್ವತಃ ಮುಖ್ಯಮಂತ್ರಿ ಒಪ್ಪಿದ್ದಾರೆಂದು ಉಪ ಮುಖ್ಯಮಂತ್ರಿ ಹೇಳಿದರು.

ಹಣಕಾಸು ಇಲಾಖೆ ಎತ್ತಿದ್ದ ಆಕ್ಷೇಪಗಳ ನಡುವೆಯೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೆಶ್ ಕುಮಾರ್ ಒತ್ತಾಸೆಯಿಂದ ಕೋವಿಡ್ ನಡುವೆಯೇ ಕೌನ್ಸೆಲಿಂಗ್ ನಡೆಸಲಾಗಿದೆ. ಉದ್ಯೋಗ ಸ್ಥಳವನ್ನೂ ತೋರಿಸಲಾಗಿದೆ. ಒಂದು ವರ್ಷದೊಳಗೆ ನೇಮಕಾತಿ ಆದೇಶ ಬೇಕು ಎನ್ನುವ ನಿಮ್ಮ ಆತಂಕ ಸರಕಾರಕ್ಕೆ ಅರ್ಥವಾಗುತ್ತದೆ. ಯಾವುದೇ ಆತಂಕ ನಿಮಗೆ ಬೇಡ. ನಂಬಿಕೆ ಇಟ್ಟು ಧರಣಿ ಕೈಬಿಡಿ. ತರಗತಿಗಳು ಆರಂಭವಾಗುತ್ತಿದ್ದಂತೆ ನೇಮಕಾತಿ ಆದೇಶ ಪತ್ರಗಳು ನಿಮ್ಮನ್ನು ತಲುಪುತ್ತವೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಕೋವಿಡ್ ಕಾರಣದಿಂದ ದೇಶದ ಯಾವುದೇ ರಾಜ್ಯದಲ್ಲೂ ನೇಮಕಾತಿಗಳು ನಡೆಯುತ್ತಿಲ್ಲ. ಅಷ್ಟೇ ಏಕೆ? ನಮ್ಮ ರಾಜ್ಯದ ಎಲ್ಲ ಇಲಾಖೆಗಳಲ್ಲೂ ಹೊಸ ನೇಮಕಾತಿಯನ್ನು ಸಂಪೂರ್ಣವಾಗಿ ತಡೆಹಿಡಿಯಲಾಗಿದೆ. ಆದರೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಪನ್ಯಾಸಕರ ನೇಮಕಕ್ಕೆ ಸರಕಾರ ಎಲ್ಲ ಅಡ್ಡಿಗಳನ್ನು ಬದಿಗೊತ್ತಿ ಒಪ್ಪಿಕೊಂಡಿದೆ ಎಂದು ಅವರು ವಿವರಿಸಿದರು.

ನಿರ್ದೇಶಕರ ಜತೆ ಮಾತುಕತೆ: ಇದೇ ವೇಳೆ ಪಿಯುಸಿ ಮಂಡಳಿ ನಿರ್ದೇಶಕಿ ಸ್ನೇಹಾಲ್ ಜತೆ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಅಶ್ವತ್ಥ ನಾರಾಯಣ ಮಾತುಕತೆ ನಡೆಸಿ, ಈ ಬಗ್ಗೆ ಅವರಿಂದ ಎಲ್ಲ ಮಾಹಿತಿಯನ್ನು ಪಡೆದುಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X