ಉಪ ಚುನಾವಣೆ: ಕ್ಷೇತ್ರ ವ್ಯಾಪ್ತಿಯ ಶಾಲೆ-ಕಾಲೇಜು, ಸರಕಾರಿ ಕಚೇರಿಗಳಿಗೆ ನ.3ಕ್ಕೆ ಸಾರ್ವತ್ರಿಕ ರಜೆ

ಬೆಂಗಳೂರು, ಅ. 15: ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಮತ ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲ ರಾಜ್ಯ ಸರಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳು, ಸರಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ನ.3ಕ್ಕೆ ಸಾರ್ವತ್ರಿಕ ರಜೆ ಘೋಷಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಮುಹಮ್ಮದ್ ನಯೀಮ್ ಮೊಮಿನ್ ಆದೇಶ ಹೊರಡಿಸಿದ್ದಾರೆ.
ಉಪಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹೊರಗಡೆ ಕೆಲಸ ನಿರ್ವಹಿಸುತ್ತಿದ್ದು ಮತ್ತು ಉಪ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತ ಮತದಾರರಾಗಿರುವವರಿಗೆ ಮತದಾನ ಮಾಡಲು ಅನುಕೂಲ ಆಗುವಂತೆ ನ.3ರ ಮಂಗಳವಾರ ವೇತನ ಸಹಿತ ರಜೆ ಘೋಷಿಸಿ ಮುಹಮ್ಮದ್ ನಯೀಮ್ ಮೊಮಿನ್ ಅವರು ಇದೇ ಸಂದರ್ಭದಲ್ಲಿ ಆದೇಶಿದ್ದಾರೆ.
Next Story





