Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಳೆಹಾನಿ ಸಂತ್ರಸ್ಥರಿಗೆ ಶೀಘ್ರವೇ ಪರಿಹಾರ...

ಮಳೆಹಾನಿ ಸಂತ್ರಸ್ಥರಿಗೆ ಶೀಘ್ರವೇ ಪರಿಹಾರ ನೀಡಿ: ಉಡುಪಿ ಜಿಲ್ಲಾಧಿಕಾರಿ

ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯಲ್ಲಿ 334.2 ಕೋಟಿ ಹಾನಿಯ ಅಂದಾಜು

ವಾರ್ತಾಭಾರತಿವಾರ್ತಾಭಾರತಿ15 Oct 2020 9:24 PM IST
share
ಮಳೆಹಾನಿ ಸಂತ್ರಸ್ಥರಿಗೆ ಶೀಘ್ರವೇ ಪರಿಹಾರ ನೀಡಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಅ.15: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಕೃಷಿ, ತೋಟಗಾರಿಕಾ ಬೆಳೆ ಸೇರಿದಂತೆ ಮನೆ ಹಾನಿಯ ಬಗ್ಗೆ ಅಧಿಕಾರಿಗಳು ತ್ವರಿತ ಗತಿಯಲ್ಲಿ ಪರಿಶೀಲಿಸಿ ನಷ್ಟವನ್ನು ಅಂದಾಜಿಸುವುದರೊಂದಿಗೆ, ಸರಕಾರದ ಮಾರ್ಗಸೂಚಿಯಂತೆ ಬಾಕಿ ಉಳಿದ ನಷ್ಟ ಪರಿಹಾರವನ್ನು ಶೀಘ್ರದಲ್ಲಿ ವಿತರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಪಂ ಕಚೇರಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಪ್ರಸಕ್ತ ಸಾಲಿನ ಮುಂಗಾರಿನಲ್ಲಿ ಈವರೆಗೆ 5040 ಮಿ.ಮೀ. ಮಳೆಯಾಗಿದ್ದು ಇದು ವಾಡಿಕೆ ಮಳೆಗಿಂತ ಶೇ.16ರಷ್ಟು ಅಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ಈವರೆಗೂ ರಸ್ತೆ, ಸೇತುವೆ, ಕೃಷಿ, ತೋಟಗಾರಿಕೆ ಬೆಳೆ, ಮನೆಗಳಿಗಾದ ಹಾನಿ ಸೇರಿದಂತೆ ಒಟ್ಟಾರೆಯಾಗಿ ಅಂದಾಜು 334.2 ಕೋಟಿ ರೂ.ನಷ್ಟು ಹಾನಿ ಯಾಗಿದೆ ಎಂದವರು ಹೇಳಿದರು.

ಮುಂದಿನ ದಿನಗಳಲ್ಲಿ ತೀವ್ರತರವಾಗಿ ಮಳೆ ಬಂದು ಹಾನಿಗೊಳಗಾದಾಗ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದ ಅವರು, ಗ್ರಾಪಂ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಯ ಸದಸ್ಯರೂ ಸಹ ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಉಡುಪಿ ನಗರ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಿಂದಾಗಿ ತಗ್ಗು ಪ್ರದೇಶ ಗಳಲ್ಲಿರುವ ಮನೆಗಳು ಮುಳುಗಿದ್ದು, ಇವುಗಳನ್ನು ಗುರುತಿಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲ ವಾಗುತ್ತದೆ.ನೀರಿನ ಹರಿವು ಸರಾಗವಾಗಿರುವಂತೆ ನಾಲಾಗಳು ಸುವ್ಯವಸ್ಥೆಯಲ್ಲಿ ರುವಂತೆ ನೋಡಿಕೊಳ್ಳಬೇಕು. ಒತ್ತುವರಿಯಾಗಿರುವ ಬಗ್ಗೆಯೂ ಪರಿಶೀಲಿಸು ವಂತೆ ನಗರಸಭೆಯ ಪೌರಾಯುಕ್ತರಿಗೆ ಸೂಚನೆ ನೀಡಿದರು.

ಕಳೆದ ತಿಂಗಳು ಮಳೆಯಿಂದಾಗಿ ತೊಂದರೆಗೊಳಗಾದ ಜನರ ರಕ್ಷಣಾ ಕಾರ್ಯವನ್ನು ಅಧಿಕಾರಿಗಳು, ಮೀನುಗಾರರು, ಸ್ವಯಂಸೇವಕರು ಉತ್ತಮವಾಗಿ ನಿರ್ವಹಿಸಿದ್ದಾರೆ. 800ಕ್ಕೂ ಅಧಿಕ ಜನರನ್ನು ಸುರಕ್ಷಿತವಾಗಿ ಪ್ರವಾಹದಿಂದ ರಕ್ಷಿಸುವಕಾರ್ಯ ನಡೆಸಿದ್ದು, ಇವರಿಗೆ ಜಿಲ್ಲಾಡಳಿತ ದಿಂದ ಅಭಿನಂದನೆಗಳನ್ನು ತಿಳಿಸಿದರು.

ಅಗ್ನಿಶಾಮಕ ದಳಕ್ಕೆ ಅಗತ್ಯವಿದ್ದಲ್ಲಿ ಹೆಚ್ಚಿನ ಬೋಟ್‌ಗಳನ್ನು ವಿಪತ್ತು ನಿರ್ವಹಣಾ ನಿಧಿಯಡಿಯಲ್ಲಿ ವ್ಯವಸ್ಥೆ ಮಾಡಲಾಗುವುದು ಹಾಗೂ ತರಬೇತಿ ಯನ್ನೂ ಸಹ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನುಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X