ದ.ಕ. ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು, ಅ.15: ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷವೂ ದ.ಕ.ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನ.1ರಂದು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅತ್ಯುತ್ತಮ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ನೀಡಲಾಗುತ್ತದೆ. ಪ್ರಸ್ತುತ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿಗಳನ್ನು ಅ.22ರೊಳಗೆ ಆಹ್ವಾನಿಸಲಾಗಿದೆ.
ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ,ಕ್ರೀಡೆ, ಕೃಷಿ, ಲಿಲಿತಕಲೆಗಳು, ಸಮಾಜಸೇವೆ, ಜಾನಪದ, ಪರಿಸರ-ವಿಜ್ಞಾನ, ವೈದ್ಯಕೀಯ, ಸಂಶೋಧನೆ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ಅರ್ಜಿಯನ್ನು ಸೇವೆ, ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ, ವಿವರಣೆಗಳನ್ನು ಜಿಲ್ಲಾಧಿ ಕಾರಿ ಕಚೇರಿಗೆ ಸಲ್ಲಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





